ಆರ್‌ಆರ್ ನಗರ ಉಪಚುನಾವಣೆ: ಮತದಾನ ವೇಳೆ ಕೊಟ್ಟ ಗ್ಲೌಸ್'ಗಳನ್ನು ಎಲ್ಲೆಂದರಲ್ಲಿ ಎಸೆದ ಜನ
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಈ ನಡುವಲ್ಲೇ ಮತಗಟ್ಟೆಯಲ್ಲಿ ಮತದಾರರಿಗೆ ನೀಡಲಾಗಿರುವ ಗ್ಲೌಸ್ ಗಳನ್ನು ಮತದಾರರು ಎಲ್ಲೆಂದಲ್ಲಿ ಬಿಸಾಡಿ ಹೋಗಿರುವುದು ಕಂಡು ಬಂದಿದೆ.

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಈ ನಡುವಲ್ಲೇ ಮತಗಟ್ಟೆಯಲ್ಲಿ ಮತದಾರರಿಗೆ ನೀಡಲಾಗಿರುವ ಗ್ಲೌಸ್ ಗಳನ್ನು ಮತದಾರರು ಎಲ್ಲೆಂದಲ್ಲಿ ಬಿಸಾಡಿ ಹೋಗಿರುವುದು ಕಂಡು ಬಂದಿದೆ.
ಕೊರೋನಾ ಹಿನ್ನೆಲೆಯಲ್ಲಿ ಮತದಾರರಿಗೆ ಹ್ಯಾಂಡ್ ಗ್ಲೌಸ್ ನೀಡಲಾಗುತ್ತಿದೆ. ಆದರೆ, ಚುನಾವಣಾ ಆಯೋಗದ ಈ ನಿರ್ಧಾರ ಮತ್ತೊಂದು ಸಮಸ್ಯೆಯನ್ನು ಸೃಷ್ಟಿ ಮಾಡಿದೆ.
ಬೂತ್ ನಂಬರ್ 137 ರಿಂದ 139ರ ಮುಂಭಾಗ ಚುನಾವಣಾ ಸಿಬ್ಬಂದಿ ನೀಡಿದ ಹ್ಯಾಂಡ್ ಗ್ಲೌಸ್ಗಳು ಬೇಕಾಬಿಟ್ಟಿಯಾಗಿ ಬಿದ್ದಿರುವ ದೃಶ್ಯ ಕಂಡು ಬಂದಿದೆ. ರಸ್ತೆಯುದ್ದಕ್ಕೂ ಹಲವಾರು ಗ್ಲೌಸ್ಗಳು ಬಿದ್ದಿವೆ.
ಕೆಲ ಮತಕ್ಷೇತ್ರಗಳಲ್ಲಿ ಹ್ಯಾಂಡ್ ಗ್ಲೌಸ್'ಗಳನ್ನು ಬಿಸಾಡಲು ವ್ಯವಸ್ಥೆಗಳನ್ನು ಮಾಡದಿರದ ಕಾರಣ ಈ ಸಮಸ್ಯೆ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತಿದೆ. ಬೂತ್ 141, 141/A ನಲ್ಲಿ ಕಸದ ಬುಟ್ಟಿ ವ್ಯವಸ್ಥೆ ಇಲ್ಲ. ಆದರೆ 143, 153 ನಲ್ಲಿ ಕಸದ ಬುಟ್ಟಿಯ ವ್ಯವಸ್ಥೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


