ಸೇತುವೆ ಮೇಲಿಂದ ಆಳಕ್ಕೆ ಬಿದ್ದ ಕಾರು: ಇಬ್ಬರು ಪ್ರಯಾಣಿಕರು ಸಾವು
ಸೇತುವೆಯಿಂದ ಸುಮಾರು 20 ಅಡಿ ಆಳಕ್ಕೆ ಕಾರೊಂದು ಬಿದ್ದು ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಲಂಡನ್ ಬ್ರಿಜ್ ಬಳಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಕಾರವಾರ: ಸೇತುವೆಯಿಂದ ಸುಮಾರು 20 ಅಡಿ ಆಳಕ್ಕೆ ಕಾರೊಂದು ಬಿದ್ದು ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಲಂಡನ್ ಬ್ರಿಜ್ ಬಳಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಮೃತರನ್ನು ಚಿಕ್ಕಮಗಳೂರು ಮೂಲದ ಕಿರಣ್ (28) ಹಾಗೂ ರಾಕೇಶ್ ಸಿ.ಆರ್ (28) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಅಂಕೋಲಾದಿಂದ ಗೋವಾ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಈ ವೇಳೆ ಕಾರವಾರದ ಲಂಡನ್ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಮರಿಗೆ ಉರುಳಿಬಿದ್ದು ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಕಾರವಾರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


