ರಾಜ್ಯ

ಹಾಸನ: ಕುಖ್ಯಾತ ರೌಡಿ ಶೀಟರ್ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

ಕುಖ್ಯಾತ ರೌಡಿ ಶೀಟರ್ ಒಬ್ಬನನ್ನು ಹಾಸನ ಜಿಲ್ಲಾ ಪೊಲೀಸರು ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ.

ಹಾಸನ: ಕುಖ್ಯಾತ ರೌಡಿ ಶೀಟರ್ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು
ಸಂಗ್ರಹ ಚಿತ್ರ
Published On :

ಹಾಸನ: ಕುಖ್ಯಾತ ರೌಡಿ ಶೀಟರ್ ಒಬ್ಬನನ್ನು ಹಾಸನ ಜಿಲ್ಲಾ ಪೊಲೀಸರು ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ.

ಕೊಲೆಯತ್ನ, ಸುಲಿಗೆ, ಬೆದರಿಕೆ ಇನ್ನಿತರ ಗಂಭೀರ ಅಪರಾಧ ಕೃತ್ಯಗಳಲ್ಲಿ‌ ಭಾಗಿಯಾಗಿದ್ದ ಕುಖ್ಯಾತ ರೌಟಿ ಶೀಟರ್ ಸುನೀಲ್ ಅಲಿಯಾಸ್ ಸುನೀಲ್ ಕುಮಾರ್ ಪೊಲೀಸರ ಗುಂಡಿನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.

ಪೊಲೀಸರ ಗುಂಡೇಟು ತಗುಲಿ ಗಂಭೀರವಾಗಿ ಗಾಯಗೊಂಡ‌ ರೌಡಿ ಸುನಿಲ್ ನನ್ನು ಹಿಮ್ಸ್ ನಲ್ಲಿ ಚಿಕಿತ್ಸೆ ಕೊಡಿಸಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ.

ಕಳೆದ ಸೆ.22ರಂದು ಸುನಿಲ್ ಮತ್ತು ಆತನ ಸಹಚರರಾದ ಅರೆಕಲ್ಲು ಹೊಸಹಳ್ಳಿ ಸಂತೋಷ್, ದೊಡ್ಡ ಮಂಡಿಗನಹಳ್ಳಿ ಪ್ರತಾಪ್, ಸೂರಿ, ರವಿ, ಸಂತೋಷ್ ಹಾಗೂ ಆಲೂರು ತಾಲ್ಲೂಕಿನ ಸತೀಶ್ ಮೂರು ಮಂದಿ ಮೇಲೆ ದಾಳಿ ಮಾಡಿ, ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಆರೋಪಿಗಳ ಪತ್ತೆಗೆ ಗ್ರಾಮಾಂತರ ಪೊಲೀಸರು ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಕೈಗೊಂಡಿದ್ದರು.

ನಗರದ ಹೊರವಲಯದ ಕೃಷ್ಣನಗರದಲ್ಲಿ ಸುನೀಲ್ ಅಡಗಿರುವ ಬಗ್ಗೆ ಖಚಿತ ಮಾಹಿತಿ‌ ಪಡೆದ ‌ಗ್ರಾಮಾಂತರ ಸಿಪಿಐ ಸುರೇಶ್ ನೇತೃತ್ವದಲ್ಲಿ ಸಬ್ ಇನ್ ಸ್ಪೆಕ್ಟರ್ ಬಸವರಾಜು ಅವರನ್ನೊಳಗೊಂಡ ತಂಡವು ನಿನ್ನೆ ಮಧ್ಯರಾತ್ರಿ ಬಂಧನ ಕಾರ್ಯಾಚರಣೆ ಕೈಗೊಂಡಿದೆ.

ರೌಡಿ ಸುನೀಲ್ ನನ್ನು ಕಂಡ ಸಬ್ ಇನ್ಸ್ಪೆಕ್ಟರ್ ಬಸವರಾಜು ಅವರು ಆತನನ್ನು ಬಂಧಿಸಲು ಮುಂದಾದಾಗ, ಚಾಕುವಿನಿಂದ ಎಡಗೈ ಮತ್ತು ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಇರಿದ ಆರೋಪಿ ಪರಾರಿಯಾಗಲು ಯತ್ನಿಸಿದಾಗ ಸಿಪಿಐ ಸುರೇಶ್ ಅವರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಸೂಚನೆ ನೀಡಿದ್ದಾರೆ. ಆದಾಗ್ಯೂ ಆರೋಪಿ ಮತ್ತೆ ಹಲ್ಲೆಗೆ ಯತ್ನಿಸಿದಾಗ ಮತ್ತೊಂದು ಸುತ್ತು ಗುಂಡು ಹಾರಿಸಿದ್ದು ಅದು ಕಾಲಿಗೆ ತಗುಲಿ ಕುಸಿದು ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ.

ಕೂಡಲೇ ಆತನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಗಾಯಾಳು ಪಿಎಸ್ಐ ಬಸವರಾಜು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಆಸ್ಪತ್ರೆಗೆ ಎಸ್‌ಪಿ ಶ್ರೀನಿವಾಸ್ ಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.