ಹೊಗೆ ಹೊರಸೂಸುವ ಪಟಾಕಿಗಳ ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ!
ದೀಪಾವಳಿ ಹತ್ತಿರ ಬರುತ್ತಿದ್ದು, ಈಗಾಗಲೇ ರಾಜಸ್ತಾನ, ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಹರಿಯಾಣ ರಾಜ್ಯಗಳಲ್ಲಿ ಪಟಾಕಿಗಳ ಮಾರಾಟವನ್ನು ನಿಷೇಧಿಸಲಾಗಿದ್ದು, ಇದೀಗ ರಾಜ್ಯ ಸರ್ಕಾರ ಕೂಡ ಹೊಗೆ ಹೊರಸೂಸುವ ಪಟಾಕಿಗಳ ಮಾರಾಟವನ್ನು ನಿಷೇಧಿಸಲು ಚಿಂತನೆ ನಡೆಸುತ್ತಿದೆ ಎಂದು ಬುಧವಾರ ತಿಳಿದುಬಂದಿದೆ.

ಬೆಂಗಳೂರು: ದೀಪಾವಳಿ ಹತ್ತಿರ ಬರುತ್ತಿದ್ದು, ಈಗಾಗಲೇ ರಾಜಸ್ತಾನ, ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಹರಿಯಾಣ ರಾಜ್ಯಗಳಲ್ಲಿ ಪಟಾಕಿಗಳ ಮಾರಾಟವನ್ನು ನಿಷೇಧಿಸಲಾಗಿದ್ದು, ಇದೀಗ ರಾಜ್ಯ ಸರ್ಕಾರ ಕೂಡ ಹೊಗೆ ಹೊರಸೂಸುವ ಪಟಾಕಿಗಳ ಮಾರಾಟವನ್ನು ನಿಷೇಧಿಸಲು ಚಿಂತನೆ ನಡೆಸುತ್ತಿದೆ ಎಂದು ಬುಧವಾರ ತಿಳಿದುಬಂದಿದೆ.
ಈ ಸಂಬಂಧ ಕೋವಿಡ್ -19 ಕುರಿತ ತಾಂತ್ರಿಕ ಸಮಿತಿಯ ಸದಸ್ಯರು ಸೇರಿದಂತೆ ಆರೋಗ್ಯ ತಜ್ಞರೊಂದಿಗೆ ಸರ್ಕಾರ ಹಲವು ಸುತ್ತಿನ ಸಭೆಗಳನ್ನೂ ನಡಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಸಭೆಯಲ್ಲಿ ಸಾಕಷ್ಟು ತಜ್ಞರು ಪಟಾಕಿಗಳು ಈಗಾಗಲೇ ಸೋಂಕಿಗೆ ಒಳಗಾದವರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂದು ತಿಳಿಸಿದ್ದಾರೆಂದು ಹೇಳಲಾಗುತ್ತಿದೆ. ಹೀಗಾಗಿಯೇ ರಾಜ್ಯದಾದ್ಯಂತ ಹೊಗೆ ಹೊರಸೂಸುವ ಪಟಾಕಿಗಳನ್ನು ನಿಷೇಧಿಸುವ ಸಾಧ್ಯತೆಗಳಿವೆ ಎಂದು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಒಂದೆರಡು ದಿನಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರೊಂದಿಗೆ ಚರ್ಚಿಸಲಿರುವ ಆರೋಗ್ಯ ಸಚಿವರು ನಂತರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಕೋವಿಡ್ -19 ಶ್ವಾಸಕೋಶದ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ, ವೈರಸ್‌ನಿಂದ ಚೇತರಿಸಿಕೊಂಡವರು ಪಟಾಕಿಗಳು ಹೊರಸೂಸುವ ಹೊಗೆಯಿಂದ ಮತ್ತಷ್ಟು ದುರ್ಬಲರಾಗುತ್ತಾರೆ. ಸೋಂಕಿನಿಂದ ಚೇತರಿಸಿಕೊಂಡವರಲ್ಲಿ ರೋಗನಿರೋಧಕ ಶಕ್ತಿ ಮತ್ತು ಉಸಿರಾಟದ ವ್ಯವಸ್ಥೆಯು ಇನ್ನೂ ದುರ್ಬಲಗೊಂಡಿರುತ್ತದೆ. ಹೀಗಾಗಿ ಇಂತಹ ಸಮಯದಲ್ಲಿ ಹೊಗೆ ಹೊರಸೂಸುವ ಪಟಾಕಿಗಳನ್ನು ಹೊಡೆಯುವುದು ಅಪಾಯಕಾರಿ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ತಜ್ಞರ ಅಭಿಪ್ರಾಯದ ಪರವಾಗಿರುವ ಸಚಿವ ಸುಧಾಕರ್ ಅವರು ಇದೀಗ ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಮಾತುಕತೆ ನಡೆಸಲಿದ್ದು, ಪಟಾಕಿ ಮಾರಾಟ ನಿಷೇಧಿಸುವ ಕುರಿತು ಚರ್ಚಿಸಲಿದ್ದಾರೆಂದು ಮೂಲಗಳು ತಿಳಿಸಿವೆ.
"ಸಿಎಂ ಅವರೊಂದಿಗೆ ಸಭೆ ನಿಗದಿಪಡಿಸಲಾಗಿದ್ದು, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


