ರಾಜ್ಯ

ಕೊಳ್ಳೇಗಾಲ: ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ, ನೇಣು ಬಿಗಿದು ಯುವಕನ ಕೊಲೆ

ವಿವಾಹೇತರ ಸಂಬಂಧ ಕಾರಣಕ್ಕೆ ಯುವಕನೊಬ್ಬನನ್ನು ಕೊಂದು ನೇಣು ಹಾಕಿಕೊಂಡಿದ್ದಾನೆ ಎಂದು ಬಿಂಬಿಸಿರುವ ಆರೋಪ ಕೇಳಿ ಬಂದಿದೆ. ಕೊಳ್ಳೇಗಾಲ ತಾಲೂಕಿನ ಗುಂಡೇಗಾಲದಲ್ಲಿ ಈ ಘಟನೆ ನಡೆದಿದೆ.

ಕೊಳ್ಳೇಗಾಲ: ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ, ನೇಣು ಬಿಗಿದು ಯುವಕನ ಕೊಲೆ
ಸಾಂದರ್ಭಿಕ ಚಿತ್ರ
Published On :

ಚಾಮರಾಜನಗರ: ವಿವಾಹೇತರ ಸಂಬಂಧ ಕಾರಣಕ್ಕೆ ಯುವಕನೊಬ್ಬನನ್ನು ಕೊಂದು ನೇಣು ಹಾಕಿಕೊಂಡಿದ್ದಾನೆ ಎಂದು ಬಿಂಬಿಸಿರುವ ಆರೋಪ ಕೇಳಿ ಬಂದಿದೆ. ಕೊಳ್ಳೇಗಾಲ ತಾಲೂಕಿನ ಗುಂಡೇಗಾಲದಲ್ಲಿ ಈ ಘಟನೆ ನಡೆದಿದೆ.

ಕೊಳ್ಳೇಗಾಲ ತಾಲೂಕಿನ‌ ಕಂಡಯ್ಯನಪಾಳ್ಯದ ಪ್ರಕಾಶ್(23) ಮೃತ ದುರ್ದೈವಿ. ಈತ ಮಹಿಳೆಯೊಬ್ಬಳ ಜೊತೆ ವಿವಾಹೇತರ ಸಂಬಂಧ ಇರಿಸಿಕೊಂಡಿದ್ದ ಎನ್ನಲಾಗಿದೆ. ಈ ವಿಚಾರ ಪತಿ ಮನೆಯವರಿಗೆ ತಿಳಿದು, ಕಳೆದ 5 ದಿನಗಳ ಹಿಂದೆ ತಮ್ಮ ಕೋಮಿನ ಪಂಚಾಯಿತಿ ಸೇರಿಸಿದ್ದರು ಎಂದು ತಿಳಿದು ಬಂದಿದೆ. 

ಪಂಚಾಯಿತಿಯಲ್ಲಿ ಪ್ರಕಾಶನ ಜೊತೆಯೇ ಇರುವುದಾಗಿ ಮಹಿಳೆ ತಿಳಿಸಿದ್ದರಿಂದ 3 ಲಕ್ಷ ರೂ. ದಂಡ ನೀಡಿ ವಿವಾಹ ಮಾಡಿಕೊಳ್ಳುವಂತೆ ತೀರ್ಪು ನೀಡಲಾಗಿತ್ತು. ಹಣ ಕೊಡುವ ತನಕ ಗುಂಡೇಗಾಲದಲ್ಲೇ ಇರುವಂತೆ ಮನೆಯೊಂದರಲ್ಲಿ ಕೂಡಿಹಾಕಿದ್ದರು ಎನ್ನಲಾಗಿದೆ.

ಪ್ರಕಾಶ್​ನ ಮನೆಯವರು ಹಣ ಹೊಂದಿಸುತ್ತಿರುವ ವಿಚಾರ ತಿಳಿದು ಮಹಿಳೆಯ ಗಂಡ ಮತ್ತು ಸಂಬಂಧಿಕರು ಉಸಿರುಗಟ್ಟಿಸಿ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪ್ರಕಾಶ್​ನ ತಾಯಿ ಮಂಜುಳಾ ಕೊಳ್ಳೇಗಾಲ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಪ್ರಿಯತಮೆ ಸೇರಿದಂತೆ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

-ನಂದೀಶ್ ಗುಳಿಪುರ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.