ಚಾಮರಾಜನಗರ: ಕಾಡಾನೆ ತುಳಿತಕ್ಕೆ 61 ವರ್ಷದ ವ್ಯಕ್ತಿ ಸಾವು
ಬಿಳಿಗಿರಿ ರಂಗನಾಥ ಮೀಸಲು ಅರಣ್ಯದ ವ್ಯಾಪ್ತಿಗೆ ರಿಸರ್ವ್ ಫಾರೆಸ್ಟ್‌ನ ಹಂಗಲವಾಡಿ ಗ್ರಾಮದಲ್ಲಿ 61 ವರ್ಷದ ವ್ಯಕ್ತಿಯೊಬ್ಬರು ಕಾಡಾನೆ ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

ಚಾಮರಾಜನಗರ: ಬಿಳಿಗಿರಿ ರಂಗನಾಥ ಮೀಸಲು ಅರಣ್ಯದ ವ್ಯಾಪ್ತಿಗೆ ರಿಸರ್ವ್ ಫಾರೆಸ್ಟ್‌ನ ಹಂಗಲವಾಡಿ ಗ್ರಾಮದಲ್ಲಿ 61 ವರ್ಷದ ವ್ಯಕ್ತಿಯೊಬ್ಬರು ಕಾಡಾನೆ ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.
ಮೃತನನ್ನು ಗುರುಸ್ವಾಮಿ ಎಂದು ಗುರುತಿಸಲಾಗಿದೆ. ಜಾನುವಾರುಗಳನ್ನು ಮೇಯಿಸಲು ಕಾಡಿಗೆ ಹೋಗಿದ್ದ ಅವರು ರಾತ್ರಿಯಾದರೂ ಹಿಂದಿರುಗಿರಲಿಲ್ಲ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬೆಳಿಗ್ಗೆ ಗ್ರಾಮಸ್ಥರು ಮತ್ತು ಕುಟುಂಬ ಸದಸ್ಯರು ಆತನನ್ನು ಹುಡುಕಿಕೊಂಡು ಹೋದಾಗ ಶವವನ್ನು ನೋಡಿ ಆಘಾತಕ್ಕೊಳಗಾಗಿದ್ದಾರೆ. ಕಳೆದ ಸಂಜೆ ತಡವಾಗಿ ಘಟನೆ ನಡೆದಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರ ನೀಡಲು ಸ್ಥಳೀಯರು ಆಗ್ರಹಿಸಿದ್ದಾರೆ.
ಕಾಡಂಚಿನ ಅರಣ್ಯದೊಳಗೆ ಗುರುಸ್ವಾಮಿ ಮೃತದೇಹ ಪತ್ತೆ
ಅರಣ್ಯದೊಳಕ್ಕೆ ಜಾನುವಾರುಗಳನ್ನು ಮೇಯಿಸಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಗುರುಸ್ವಾಮಿ ಬುಧವಾರ ರಾತ್ರಿ ಮನೆಗೆ ಬಾರದೇ ಇದ್ದಾಗ ಬೆಳಗ್ಗೆ ಹುಡುಕಾಟ ನಡೆಸಿದ್ದಾರೆ. ಕಾಡಂಚಿನ ಅರಣ್ಯದೊಳಗೆ ಗುರುಸ್ವಾಮಿ ಮೃತದೇಹ ಪತ್ತೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


