ರಾಜ್ಯ

ಕೊರೋನಾ ಸೋಂಕು ನಿಯಂತ್ರಿಸಲು ದಿಟ್ಟ ಕ್ರಮ: ರಾಜ್ಯಕ್ಕೆ ಕೇಂದ್ರ ಸರ್ಕಾರ ಮೆಚ್ಚುಗೆ

ಕೊರೋನಾ ನಿಯಂತ್ರಣ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ದಿಟ್ಟಕ್ರಮಗಳು ಸಮಾಧಾನಕರವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಹೇಳಿದ್ದಾರೆ. ಅಲ್ಲದೆ, ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಸಲಹೆ ನೀಡಿದ್ದಾರೆ.

ಕೊರೋನಾ ಸೋಂಕು ನಿಯಂತ್ರಿಸಲು ದಿಟ್ಟ ಕ್ರಮ: ರಾಜ್ಯಕ್ಕೆ ಕೇಂದ್ರ ಸರ್ಕಾರ ಮೆಚ್ಚುಗೆ
ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್
Published On :

ಬೆಂಗಳೂರು: ಕೊರೋನಾ ನಿಯಂತ್ರಣ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ದಿಟ್ಟಕ್ರಮಗಳು ಸಮಾಧಾನಕರವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಹೇಳಿದ್ದಾರೆ. ಅಲ್ಲದೆ, ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಸಲಹೆ ನೀಡಿದ್ದಾರೆ. 

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಹಾಗೂ ವ್ಯಾಕ್ಸಿನ್ ವಿತರಣೆಗೆ ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹಾಗೂ ಇಲಾಖೆಯ ಅಧಿಕಾರಿಗಳು ಮತ್ತು ಎಲ್ಲಾ ಜಿಲಾಲಾಡಳಿತಗಳೊಂದಿಗೆ ಬುಧವಾರ ವಿಡಿಯೋ ಸಂವಾದ ನಡೆಸಿದ ಅವರು, ಕರ್ನಾಟಕದಲ್ಲಿ ಲಾಕ್ಡೌನ್ ಸಡಿಲಿಕೆ ಬಳಿಕ ಹೆಚ್ಚಳವಾಗಿದ್ದ ಸೋಂಕು ಮತ್ತು ಸಾವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದು ಸಮಾಧಾನಕರ ಸಂಗತಿ ಎಂದು ಹೇಳಿದ್ದಾರೆ. 

ಮುಂದಿನ ದಿನಗಳಲ್ಲಿ ಮತ್ತಷ್ಟು ಸುಧಾರಣಾ ಕ್ರಮಗಳ ಮೂಲಕ ಸಂಪೂರ್ಣ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಮುಂಬರುವ ಚಳಿಗಾಲ ಮತ್ತು ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಕಾರ್ಯತಂತ್ರ ರೂಪಿಸಬೇಕು. ಅಂತರಾಷ್ಟ್ರೀಯ ಮತ್ತು ಅಂತರಾಜ್ಯ ಪ್ರಯಾಣಿಕರ ಮೇಲೆ ನಿಗಾವಹಿಸಬೇಕು ಎಂದು ತಿಳಿಸಿದ್ದಾರೆ. 

ಸಚಿವ ಸುಧಾಕರ್ ಅವರು ರಾಜ್ಯ ಸರ್ಕಾರ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹಂತ ಹಂತವಾಗಿ ಹೊರಡಿಸಿದ ಎಲ್ಲಾ ಮಾರ್ಗಸೂಚಿಗಳ ಅನುಷ್ಠಾನಕ್ಕೆ ಕೈಗೊಂಡಿರುವ ಕ್ರಮಗಳನ್ನು ಕೇಂದ್ರ ಸಚಿವರಿಗೆ ಸವಿವರವಾಗಿ ವಿವರಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.