ವಿನಯ್ ಕುಲಕರ್ಣಿ ಬಂಧನದಲ್ಲಿ ಕೇಂದ್ರ, ರಾಜ್ಯ ನಾಯಕರ ಕೈವಾಡ: ಪಂಚಮಸಾಲಿ ಶ್ರೀ
ಲಿಂಗಾಯತ ಸಮಾಜದ ಮುಖಂಡರೊಬ್ಬರನ್ನು ಸಿಬಿಐ ಪೋಲಿಸರು ಬಂದಿಸಿರುವುದು ಖಂಡನೀಯ. ಉತ್ತಮ ಹಿನ್ನಲೆಯುಳ್ಳ ಕುಟುಂಬದಿಂದ ಬಂದ ವ್ಯಕ್ತಿಯನ್ನು ಬೆಳಗಿನ ಜಾವ ಏಕಾಏಕಿ ಬಂದಿಸಿರುವುದು ಸರಿಯಲ್ಲ ಎಂದು ಪಂಚಮಸಾಲಿ ಮಠದ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ.

ಬೆಂಗಳೂರು: ಲಿಂಗಾಯತ ಸಮಾಜದ ಮುಖಂಡರೊಬ್ಬರನ್ನು ಸಿಬಿಐ ಪೋಲಿಸರು ಬಂದಿಸಿರುವುದು ಖಂಡನೀಯ. ಉತ್ತಮ ಹಿನ್ನಲೆಯುಳ್ಳ ಕುಟುಂಬದಿಂದ ಬಂದ ವ್ಯಕ್ತಿಯನ್ನು ಬೆಳಗಿನ ಜಾವ ಏಕಾಏಕಿ ಬಂದಿಸಿರುವುದು ಸರಿಯಲ್ಲ ಎಂದು ಪಂಚಮಸಾಲಿ ಮಠದ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ.
ವಿನಯ್ ಕುಲಕರ್ಣಿ ಅವರನ್ನು ಬಂಧಿಸುವ ಮುನ್ನ ಕನಿಷ್ಠ ನೋಟಿಸ್ ನೀಡಬಹುದಿತ್ತು. ಚುನಾವಣೆ ಸಂದರ್ಭದಲ್ಲಿ ಕೇವಲ ನಮ್ಮ ಜನಾಂಗವನ್ನು ಬಳಕೆ ಮಾಡಿಕೊಳ್ಳುವ ಪವೃತ್ತಿಯನ್ಬು ರಾಜಕೀಯ ನಾಯಕರು ಬೆಳೆಸಿಕೊಂಡಿದ್ದಾರೆ ಎಂದು ಪಂಚಮಸಾಲಿ ಶ್ರೀ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಪಂ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧಿಯಲ್ಲದಿದ್ದರೂ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸುವುದು ಸರಿಯಲ್ಲ. ಮುಖ್ಯ ಮಂತ್ರಿಗಳು ಈ ವಿಚಾರ ಕುರಿತು ಸಕಾರತಾತ್ಮಕ ನಿರ್ಧಾರ ಕೈಗೊಳ್ಳಬೇಕು ಎಂದರು.
ನಮ್ಮ ಇಡೀ ಸಮುದಾಯ, ಪಂಚಾಮ ಸಾಲಿ ಮಠ ವಿನಯ್ ಕುಲಕರ್ಣಿ ಜೊತೆಗಿದೆ. ಇಡೀ ಧಾರವಾಡದಲ್ಲಿ ವಿನಯ್ ಕುಲಕರ್ಣಿ ಏನೆಂಬುದು ಗೊತ್ತಿದೆ. ಅವರನ್ನು ರಾಜಕೀಯವಾಗಿ ಹತ್ತಿಕ್ಕುವ ಪ್ರಯತ್ನ ನಡೆಸಿರುವುದು ಸರಿಯಲ್ಲ. ದ್ವೇಷ ರಾಜಕಾರಣ ಮಾಡುವುದು ಸರಿಯಲ್ಲ. ಈ ನಡೆ ಒಳ್ಳೆಯದಲ್ಲ. ಮುಖ್ಯಮಂತ್ತಿಗಳು ಮಧ್ಯ ಪ್ರವೇಶಿಸಿ ಇದನ್ನು ಸರಿಪಡಿಸಬೇಕು. ಇಡೀ ಧಾರವಾಡಕ್ಕೆ ಗೊತ್ತಿದೆ ಯಾರು ದ್ವೇಷ ರಾಜಕೀಯ ಮಾಡುತ್ತಾರೆ ಎಂದು ಇಂತಹ ನಡೆ ಸರಿಯಲ್ಲ ಎಂದು ಕಿಡಿಕಾರಿದರು.
ವಿನಯ್ ಕುಲಕರ್ಣಿ ಬಂಧನದಲ್ಲಿ ಕೇಂದ್ರ ಹಾಗೂ ರಾಜ್ಯ ನಾಯಕರ ಕೈವಾಡ ಇದೆ ಎಂದು ಶ್ರೀಗಳು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


