ರಾಜ್ಯ

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ: 7 ಮಹಿಳೆಯರ ರಕ್ಷಣೆ, 6 ಮಂದಿ ಬಂಧನ

ಯುವತಿಯರನ್ನು ವಶದಲ್ಲಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಕೇಂದ್ರ ಅಪರಾಧ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ 7 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ: 7 ಮಹಿಳೆಯರ ರಕ್ಷಣೆ, 6 ಮಂದಿ ಬಂಧನ
ಸಂಗ್ರಹ ಚಿತ್ರ
Published On :

ಬೆಂಗಳೂರು: ನಗರದ ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಪಿಂಪ್ ಸೇರಿ ಆರು ಜನ ಆರೋಪಿಗಳನ್ನು ಬಂಧಿಸಿ, ಏಳು ಮಹಿಳೆಯರನ್ನು ಸಿಸಿಬಿ ಪೊಲೀಸರು ರಕ್ಷಿಸಿದ್ದಾರೆ.

ಕಾಟನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಲಾಡ್ಜ್ ಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.

ದಾಳಿ ವೇಳೆ ಪಿಂಪ್ ಮನೋಜ್ ಸೇರಿ ಆರು ಆರೋಪಿಗಳನ್ನು ಬಂಧಿಸಿ, ಏಳು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು, ಹೊರ ರಾಜ್ಯದ ಅಮಾಯಕ ಯುವತಿಯರನ್ನು ಕೆಲಸ ಕೊಡಿಸುವುದಾಗಿ ನಗರಕ್ಕೆ ಕರೆತಂದು, ತದನಂತರ ಹೆಚ್ಚು ಹಣದ ಆಮಿಷ ಒಡ್ಡಿ ವೇಶ್ಯಾವಾಟಿಕೆ ದಂಧೆಯಲ್ಲಿ ದೂಡುತ್ತಿದ್ದಾಗ ಬಾಯ್ಬಿಟ್ಟಿದ್ದಾರೆ.

ಗಿರಾಕಿಗಳಿಗೆ ಯುವತಿಯರ ಫೋಟೋಗಳನ್ನು ಕಳುಹಿಸಿ, ಅಕ್ರಮವಾಗಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.