ರಾಜ್ಯ

ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಪುನರ್ವಸತಿ, ಭೂಮಿ ಹಕ್ಕು ನೀಡಲು ಜಂಟಿ ಸರ್ವೇ ನಡೆಸಲು ಸಿಎಂ ಸೂಚನೆ

ಶಿವಮೊಗ್ಗ ಜಿಲ್ಲೆಯ ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಸಂಬಂಧಿ ಸಿದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾ ದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಪುನರ್ವಸತಿ, ಭೂಮಿ ಹಕ್ಕು ನೀಡಲು ಜಂಟಿ ಸರ್ವೇ ನಡೆಸಲು ಸಿಎಂ ಸೂಚನೆ
Published On :

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಸಂಬಂಧಿ ಸಿದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾ ದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
 
ಜಿಲ್ಲೆಯ ಶಿವಮೊಗ್ಗ,ಶಿಕಾರಿಪುರ,ಸೊರಬ,ಸಾಗರ,ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಮುಳುಗಡೆ ಸಂತ್ರಸ್ತರೆಂದು ಗುರುತಿಸಲ್ಪಟ್ಟು ಸುಮಾರು 9773 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಸಾಗುವಳಿ ಮಾಡಿಕೊಂಡು ಬಂದಿರುವ ರೈತರಿಗೆ ಭೂಮಿಯ ಹಕ್ಕನ್ನು ದಾಖಲೆ ಮಾಡುವ ನಿಟ್ಟಿನಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆ ಯವರು ಜಂಟಿ ಸಮೀಕ್ಷೆ ನಡೆಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.

ಈ ಸಮೀಕ್ಷೆಯ ಆಧಾರದಲ್ಲಿ ಸಂತ್ರಸ್ತರಿಗೆ ವೈಯಕ್ತಿಕ ಪಹಣಿ ದಾಖಲಿಸಲು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸ ಲು ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಪ್ರವಾಸೋದ್ಯಮ ಇಲಾಖೆಯವತಿ ಯಿಂದ ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ನಿರಾಕ್ಷೇಪ ಣಾ ಪತ್ರ (ಎನ್ ಓ ಸಿ) ನೀಡುವಂತೆ ಕೋರಲಾಗಿದೆ. ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  

ಮೈಸೂರು ಕಾಗದ ಕಾರ್ಖಾನೆಯ ಅರಣ್ಯ ಪ್ರದೇಶದಲ್ಲಿ ಬೆಳೆದಿರುವ ಮರಗಳನ್ನು ಕಟಾವು ಮಾಡಿ,ಮಾರಾಟ ಮಾಡುವ ಮೂಲಕ ಸಿಬ್ಬಂದಿ ವೇತನ ಪಾವತಿಸಲು ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ಪುನರ್ವಸತಿ ತಡವಾಗಿದ್ದು‌ ನಿಗದಿತ ದಿನಾಂಕದ ಒಳಗೆ ಕೆಲಸ ಮಾಡಬೇಕು ಅಂತ ಮುಖ್ಯಮಂತ್ರಿಗಳು ಹಾಗು ಶಿವಮೊಗ್ಗದ ಸಂಸದರಾದ ಬಿ.ವೈ.ರಾಘವೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.