ಪಟಾಕಿ ನಿಷೇಧಕ್ಕೆ ಸಹಕರಿಸಿ, ಸರಳ ದೀಪಾವಳಿ ಆಚರಿಸಿ: ಡಾ. ಕೆ.ಸುಧಾಕರ್ ಕರೆ
ಈ ಬಾರಿ ಸರಳ ದೀಪಾವಳಿ ಆಚರಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಬೆಂಗಳೂರು: ಈ ಬಾರಿ ಸರಳ ದೀಪಾವಳಿ ಆಚರಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಸಾನಿಕಯುಕ್ತ ಪಟಾಕಿ ನಿಷೇಧಿಸಿ ಈ ಬಾರಿ ಸರಳ ದೀಪಾವಳಿ ಮಾಡಬೇಕು. ಈ ವರ್ಷ ಯಾರೂ ಪಟಾಕಿ ಸಿಡಿಸಬಾರದೆಂದು ಮುಖ್ಯಮಂತ್ರಿ ತೀರ್ಮಾನಿಸಿದ್ದಾರೆ. ಆರೋಗ್ಯದ ದೃಷ್ಟಿಯಿಂದ ಪಟಾಕಿ ನಿಷೇಧ ಮಾಡಲಾಗಿದೆ.ಈ ಸಂಬಂಧ ಆರೋಗ್ಯ ಇಲಾಖೆಯ ತಾಂತ್ರಿಕ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.ಈ ವರದಿಯ ಹಿನ್ನೆಲೆಯಲ್ಲಿ ಪಟಾಕಿ ನಿಷೇಧಿಸಲಾಗಿದೆ ಎಂದರು.
ಕದ್ದು ಮುಚ್ಚಿ ಪಟಾಕಿ ಸಿಡಿಸುವವರ ಮೇಲೂ ನಿಗಾ ವಹಿಸಲಾಗುವುದು. ಕದ್ದು ಮುಚ್ಚಿ ಪಟಾಕಿ ಸಿಡಿಸುವುದನ್ನು ತಡೆಯಲು ನಾಳೆ ಚರ್ಚಿಸಿ ನಿಯಮ ರೂಪಿಸಲಾಗುವುದು. ಪಟಾಕಿ ನಿಷೇಧಕ್ಕೆ ಜನರು ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು.
'ಉಪಚುನಾವಣೆ ನಡೆದ ಎರಡು ಕ್ಷೇತ್ರದಲ್ಲಿ ಹೆಚ್ಚು ಪರೀಕ್ಷೆ ನಡೆಸಬೇಕು ಅಂತ ತಜ್ಞರ ಸಮಿತಿ ವರದಿ ನೀಡಿದೆ. ಅದೇ ರೀತಿ ಗ್ರಾಮ ಪಂಚಾಯತಿ ಚುನಾವಣೆ ಸಹ ಮುಂದೂಡಲು ವರದಿ ನೀಡಿದ್ದಾರೆ. ಈ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಲು ಚಿಂತನೆ ಮಾಡಲಾಗಿದೆ. ಸಿಎಂ ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ಸರ್ಕಾರದ ನಿರ್ಧಾರ ಘೋಷಣೆ ಮಾಡಲಾಗುವುದು. ಈ ಬಾರಿ ಸರಳ ದೀಪಾವಳಿ ಆಚರಿಸಬೇಕಿದೆ. ದೀಪ ಹಚ್ಚುವ ಮೂಲಕ ಹಬ್ಬ ಆಚರಣೆ ಮಾಡಬೇಕು. ಪಟಾಕಿಯಿಂದ ಶ್ವಾಸಕೋಶದ ಸಮಸ್ಯೆ ಸೃಷ್ಟಿಯಾಗುತ್ತದೆ. ಈ ಕಾರಣದಿಂದ ತಜ್ಞರು ಪಟಾಕಿ ಬೇಡ ಎಂದಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಗ್ರಾಮ ಪಂಚಾಯತಿ ಚುನಾವಣೆ ಸದ್ಯಕ್ಕೆ ಬೇಡ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಮನೆಮನೆಗೆ ಕೋವಿಡ್ ತಲುಪಿಸಿದಂತೆ ಆಗುತ್ತದೆ. ಫೆಬ್ರವರಿವರೆಗೆ ಚುನಾವಣೆ ಮುಂದೂಡುವುದು ಒಳಿತು ಎಂದು ತಜ್ಞರು ಅಭಿಪ್ರಾಯ ನೀಡಿದ್ದಾರೆ.
ಎ ಸಿಂಪ್ಟಮ್ಯಾಟಿಕ್ ಆಗಿದ್ದವರಿಗೆ ಮತ್ತೆ ಸೋಂಕು ತಗುಲಿದರೆ ಅಪಾಯ ಹೆಚ್ಚು!
ಮೊದಲ ಬಾರಿಗೆ ಎ ಸಿಂಪ್ಟಮ್ಯಾಟಿಕ್ ಆಗಿದ್ದವರಿಗೆ ಎರಡನೇ ಬಾರಿಗೆ ಕೊರೋನಾ ಬಂದರೆ ಅವರಿಗೆ ಸೋಂಕಿನ ತೀವ್ರತೆ ಹೆಚ್ಚಿರುತ್ತದೆ. ಏಕೆಂದರೆ ಇವರಲ್ಲಿ ರೋಗ ನಿರೋಧಕ ಶಕ್ತಿ ಉತ್ಪತ್ತಿ ಆಗಿರುವುದಿಲ್ಲ. ಅದೇ ಮೊದಲ ಬಾರಿ ತೀವ್ರ ರೋಗ ಲಕ್ಷಣ ಕಂಡುಬಂದವರಿಗೆ ಎರಡನೇ ಬಾರಿಗೆ ಕೊರೋನಾ ಸೋಂಕು ತಗುಲಿದರೆ ಅದರ ತೀವ್ರತೆ ಹೆಚ್ಚು ಇರುವುದಿಲ್ಲ. ಇದು ಅಧ್ಯಯನದಿಂದ ತಿಳಿದು ಬಂದಿದೆ. ಶೇ.5 ರಷ್ಟು ಮಂದಿಗೆ ಕೊರೋನಾ ಮರುಕಳಿಸಿದೆ ಎಂಬ ಅಂಕಿ-ಅಂಶವೂ ಬೆಳಕಿಗೆ ಬಂದಿದೆ. ಹೀಗಾಗಿ ಒಮ್ಮೆ ಕೊರೋನಾ ಬಂದರೆ ಮತ್ತೊಮ್ಮೆ ಬರುವುದಿಲ್ಲ ಎಂಬ ತಪ್ಪು ಗ್ರಹಿಕೆ ಬೇಡ. ಲಸಿಕೆ ಬರುವ ತನಕ ಎಲ್ಲರೂ ಮುಂಜಾಗ್ರತೆ ವಹಿಸಲೇಬೇಕು ಎಂದು ಸುಧಾಕರ್ ಕಿವಿಮಾತು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


