ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮೂರು ದಿನ ಸಿಬಿಐ ಕಸ್ಟಡಿ: ಕೋರ್ಟ್ ಆದೇಶ
ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.

ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿರುವ ವಿನಯ್ ಕುಲಕರ್ಣಿಯವರನ್ನು ಮೂರು ದಿನ ಸಿಬಿಐ ಕಸ್ಟಡಿಗೆ ಒಪ್ಪಿಸಿ ಧಾರವಾಡದ 32ನೇ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.
ಗುರುವಾರ ಬೆಳಿಗ್ಗೆ ಸಿಬಿಐ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವರನ್ನು ವಶಕ್ಕೆ ಪಡೆದಿತ್ತು. ಸಂಜೆ ವೇಳೆಗೆ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆ ವೇಳೆ ವಿಚಾರಣೆ ನಡೆಸಿದ್ದ ಕೋರ್ಟ್ ಒಂದು ದಿನದ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ನೀಡಿತ್ತು.
ಇಂದು ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆ ಮತ್ತೆ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿಯವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಷ್ಟೇ ಅಲ್ಲದೆ ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿದ್ದರು, ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ವಿನಯ್ ಕುಲಕರ್ಣಿಯವರನ್ನು ಕಸ್ಟಡಿಗೆ ನೀಡಿ ಆದೇಶಿಸಿದೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


