ಆರ್ ಆರ್ ನಗರ ಉಪಚುನಾವಣೆ: ಚಾಮುಂಡೇಶ್ವರಿ ದರ್ಶನ ಪಡೆದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ
ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರ ಉಪಚುನಾವಣೆಯ ಮತದಾನ ಮುಗಿದಿದ್ದು ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ. ಈ ಮಧ್ಯೆ ಫಲಿತಾಂಶಕ್ಕೂ ಮುನ್ನ ಆರ್.ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.

ಮೈಸೂರು: ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರ ಉಪಚುನಾವಣೆಯ ಮತದಾನ ಮುಗಿದಿದ್ದು ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ. ಈ ಮಧ್ಯೆ ಫಲಿತಾಂಶಕ್ಕೂ ಮುನ್ನ ಆರ್.ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.
ತಂದೆ ಹನುಮಂತಪ್ಪ ಜೊತೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು, ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಕುಸುಮಾ ಅವರಿಗೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು.
ತಾಯಿ ಚಾಮುಂಡೇಶ್ವರಿ ದರ್ಶನದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಕುಸುಮಾ, ನನಗೆ ಗೆಲ್ಲುವ ಆತ್ಮವಿಶ್ವಾಸ ಇದೆ. ಶೇಕಡವಾರು ಕಡಿಮೆ ಆಯ್ತೆಂಬ ಕಾರಣಕ್ಕೆ ಈ ವಿಶ್ವಾಸ ವ್ಯಕ್ತಪಡಿಸುತ್ತಿಲ್ಲ.
ಜನರು ನನಗೆ ತೋರಿಸಿದ ಪ್ರೀತಿಯಿಂದ ಈ ವಿಶ್ವಾಸ ಮೂಡಿದೆ. ನಿಷ್ಪಕ್ಷಪಾತ ಚುನಾವಣೆ ನಡೆದಿದೆ. ನಾವು ಇದನ್ನೆ ಬಯಸಿದ್ದೆವು. ಎಲ್ಲಾ ಪಕ್ಷದ ಮತದಾರರು ನನಗೆ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ನ ಎಲ್ಲಾ ನಾಯಕರು ಒಗ್ಗಟ್ಟಾಗಿ ನನ್ನನ್ನು ಬೆಂಬಲಿಸಿದ್ದಾರೆ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


