ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಹಾಜರು ಹಿನ್ನೆಲೆ: ಬಿಗಿ ಪೊಲೀಸ್ ಭದ್ರತೆ
ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಿಬಿಐ ಕಸ್ಟಡಿ ಇಂದು ಅಂತ್ಯಗೊಳ್ಳಲಿದ್ದು, ವಿನಯ್ ಅವರನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಧಾರವಾಡ: ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಿಬಿಐ ಕಸ್ಟಡಿ ಇಂದು ಅಂತ್ಯಗೊಳ್ಳಲಿದ್ದು, ವಿನಯ್ ಅವರನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.
ಸಿಬಿಐ ಅಧಿಕಾರಿಗಳು ಅವರನ್ನು ನ್ಯಾಯಾಲಯಕ್ಕೆ ಕರೆತರಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಾಟ್ಸ್ಆ್ಯಪ್, ಫೇಸ್ ಬುಕ್ನಲ್ಲಿ ಪೋಸ್ಟ್ ಹಾಕಿ ಹೆಚ್ಚಿನ ಸಂಖ್ಯೆಯಲ್ಲಿ ಕೋರ್ಟ್ ಆವರಣದಲ್ಲಿ ಹಾಜರಾಗುವಂತೆ ಬೆಂಬಲಿಗರಿಗೆ ಕರೆ ನೀಡಿದ್ದಾರೆ.
ಆದ್ದರಿಂದ ಧಾರವಾಡದ ಜಿಲ್ಲಾ ನ್ಯಾಯಾಲಯದ ಬಳಿ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಸೇರುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


