ರಾಜ್ಯ

ಡ್ರಗ್ಸ್ ಪ್ರಕರಣ: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಬಂಧನ

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರ ಪುತ್ರ ದರ್ಶನ್ ಕುಮಾರ್ ಲಮಾಣಿ ಅವರನ್ನು ಬೆಂಗಳೂರು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಡ್ರಗ್ಸ್ ಪ್ರಕರಣ: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಬಂಧನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರ ಪುತ್ರ ದರ್ಶನ್ ಕುಮಾರ್ ಲಮಾಣಿ ಅವರನ್ನು ಬೆಂಗಳೂರು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಡ್ರಗ್ಸ್ ಪೆಡ್ಲರ್ ಗಳಿಗೆ ಗೋವಾದಲ್ಲಿ ಆಶ್ರಯ ನೀಡಿದ ಆರೋಪದ ಮೇಲೆ ದರ್ಶನ್ ಕುಮಾರ್ ಲಮಾಣಿಯನ್ನು ಬಂಧಿಸಲಾಗಿದೆ. ಡ್ರಗ್ಸ್ ಪೆಡ್ಲರ್ ಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ದರ್ಶನ್ ನೆರವು ನೀಡಿದ್ದರು ಎನ್ನಲಾಗಿದೆ.

ದರ್ಶನ್ ಲಮಾಣಿ ಡ್ರಗ್ಸ್ ಡೀಲಿಂಗ್ ನಲ್ಲೂ ಭಾಗಿಯಾಗಿದ್ದು, ಡಾರ್ಕ್ ನೆಟ್ ಮೂಲಕ ಡ್ರಗ್ಸ್ ತರಿಸಿಕೊಳ್ಳುತ್ತಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ಅಂಚೆ ಕಛೇರಿಗೆ ದರ್ಶನ್ ಹೆಸರಿಗೆ ಡ್ರಗ್ಸ್ ಮತ್ತು ಹೈಡ್ರೋ ಗಾಂಜಾ ಪರ್ಸಲ್ ನಲ್ಲಿ ಬಂದಿತ್ತು. ಚಾಮರಾಜಪೇಟೆ ಫಾರಿನ್ ಪೋಸ್ಟ್ ಆಫೀಸ್ ಗೆ ಪರ್ಸಲ್ ತರಲು ಹೋದಾಗ ದರ್ಶನನ್ನು ಪೊಲೀಸರು ಬಂಧಿಸಿದ್ದಾರೆ.

ರುದ್ರಪ್ಪ ಲಮಾಣಿ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಜವಳಿ ಖಾತೆ ಸಚಿವರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.