ರಾಜ್ಯ

ದಾವಣಗೆರೆ: ಸಚಿವ ಜಗದೀಶ್ ಶೆಟ್ಟರ್ ಪುತ್ರ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಪ್ರಶಾಂತ್ ಶೆಟ್ಟರ್ ಅವರ ಕಾರು ಮಂಗಳವಾರ ಅಪಘಾತಕ್ಕೀಡಾಗಿದೆ.

ದಾವಣಗೆರೆ: ಸಚಿವ ಜಗದೀಶ್ ಶೆಟ್ಟರ್ ಪುತ್ರ ಚಲಾಯಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ
ಅಪಘಾತಕ್ಕೀಡಾದ ಕಾರು
Published On :

ದಾವಣಗೆರೆ: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಪ್ರಶಾಂತ್ ಶೆಟ್ಟರ್ ಅವರ ಕಾರು ಮಂಗಳವಾರ ಅಪಘಾತಕ್ಕೀಡಾಗಿದೆ. 

ಹಳೇ ಕುಂದುವಾಡ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ನಡೆದಿದ್ದು, ಘಟನೆಯಲ್ಲಿ ಸಚಿವರ ಪ್ರಶಾಂತ್ ಶೆಟ್ಟರ್ ಹಾಗೂ ಅವರ ಪತ್ನಿ ಅಂಚಲ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಬಳಿ ಕೆಎ 05, ಎಆರ್ 6577 ನಂಬರ್ ನ ಲಾರಿ ಹಾಗೂ ಶೆಟ್ಟರ್ ಪುತ್ರನ ಕೆಎ 03 ಎನ್ ಇ 8 ನಂಬರ್ ಲ್ಯಾಂಡ್ ರೋವರ್ ಡಿಸ್ಕವರಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.

ಪ್ರಶಾಂತ್ ಶೆಟ್ಟರ್ ಅವರು ಇಂದು ದಾವಣಗೆರೆಯಿಂದ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ಪಿಎಸ್‍ಐ ಕಿರಣ್ ಕುಮಾರ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.