ರಾಜ್ಯ

ರಾಯಚೂರು: ಕಾರುಗಳ ಮುಖಾಮುಖಿ ಡಿಕ್ಕಿ; ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ ನಗರದ ಹೊರವಲಯದ ಮಂತ್ರಾಲಯ ರಸ್ತೆಯ ಮಂಜರ್ಲಾ ಕ್ರಾಸ್ ಬಳಿ ಸಂಭವಿಸಿದೆ.

ರಾಯಚೂರು: ಕಾರುಗಳ ಮುಖಾಮುಖಿ ಡಿಕ್ಕಿ; ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಸಾವು
ಸಂಗ್ರಹ ಚಿತ್ರ
Published On :

ರಾಯಚೂರು: ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟಿರುವ ದಾರುಣ ಘಟನೆ ನಗರದ ಹೊರವಲಯದ ಮಂತ್ರಾಲಯ ರಸ್ತೆಯ ಮಂಜರ್ಲಾ ಕ್ರಾಸ್ ಬಳಿ ಸಂಭವಿಸಿದೆ.

ಮೃತರನ್ನು ಅಭಿಷೇಕ, ಬಸವರಾಜು, ಗಣೇಶ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸಿದ್ಧಾರ್ಥ, ಭೀಮರೆಡ್ಡಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ರೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಯರಗೇರಾದಿಂದ ಬರುತ್ತಿದ್ದ ಕಾರು ಮತ್ತು ರಾಯಚೂರಿನಿಂದ ಹೋಗುತ್ತಿದ್ದ ಕಾರಿಗಳೆರಡರ ಮಧ್ಯೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿಗಳೆಲ್ಲರೂ ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ವರದಿ ಆಗಿದೆ.
ಘಟನೆಗೆ ಸಂಬಂಧಿಸಿದಂತೆ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.