ಕುವೆಂಪು ಪುಣ್ಯತಿಥಿ: ಮುಖ್ಯಮಂತ್ರಿ, ಸಚಿವರಿಂದ ಸ್ಮರಣೆ
ರಾಷ್ಟ್ರಕವಿ ಕುವೆಂಪು ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಅವರನ್ನು ಸ್ಮರಿಸಿದ್ದಾರೆ.

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಅವರನ್ನು ಸ್ಮರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕನ್ನಡದ ಅಗ್ರಮಾನ್ಯ ಕವಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ಕರ್ನಾಟಕ ರತ್ನ, ರಾಷ್ಟ್ರಕವಿ ಕುವೆಂಪು ಅವರ ಪುಣ್ಯತಿಥಿಯಂದು ಅವರಿಗೆ ನಮನಗಳನ್ನು ಸಲ್ಲಿಸೋಣ. ವಿಶ್ವಮಾನವತೆಯ ಪ್ರತಿಪಾದಕ, ಕನ್ನಡದ ಕಟ್ಟಾಳು ಕುವೆಂಪು ಕನ್ನಡಿಗರ ಪಾಲಿಗೆ ಸದಾ ಸ್ಮರಣೀಯರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕನ್ನಡ ಸಾರಸ್ವತ ಲೋಕದ ಮಕುಟಮಣಿ, ರಾಷ್ಟ್ರಕವಿ ಕುವೆಂಪು ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸೋಣ. ವಿಶ್ವಮಾನವ ಸಂದೇಶ ಸಾರಿದ ಕುವೆಂಪು ಅವರ ಸಾಹಿತ್ಯ ಎಲ್ಲ ಕಾಲಕ್ಕೂ ಪ್ರಸ್ತುತವಾಗಿದ್ದು ಅವರ ಉದಾತ್ತ ಚಿಂತನೆಗಳನ್ನೂ, ತತ್ವಸಿದ್ಧಾಂತಗಳನ್ನೂ ಅರಗಿಸಿಕೊಂಡು ಅವನ್ನು ದಾರಿದೀಪವಾಗಿಟ್ಟುಕೊಂಡರೆ ಅದೇ ನಾವು ಅವರಿಗೆ ಸಲ್ಲಿಸುವ ಶ್ರದ್ಧಾಂಜಲಿ ಎಂದು ತಿಳಿಸಿದ್ದಾರೆ.
ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಕನ್ನಡ ಸಾರಸ್ವತ ಲೋಕದ ದಿಗ್ಗಜ ಕವಿ, ಕನ್ನಡಕ್ಕೆ ಮೊಟ್ಟಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ದಾರ್ಶನಿಕ ಸಾಹಿತಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ ಪುಣ್ಯಸ್ಮರಣೆಯಂದು ನಮನಗಳನ್ನು ಸಲ್ಲಿಸೋಣ ಎಂದು ಟ್ವಿಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


