ಪುರಸಭೆ ಅಧ್ಯಕ್ಷ ಚುನಾವಣೆ ವೇಳೆ ಮಹಿಳಾ ಸದಸ್ಯೆಯನ್ನ ಎಳೆದಾಡಿ ಅಸಭ್ಯ ವರ್ತನೆ ತೋರಿದ ಬಿಜೆಪಿ ಶಾಸಕ?
ಪುರಸಭೆಯ ಅಧ್ಯಕ್ಷ ಸ್ಥಾನ ಚುನಾವಣೆ ವೇಳೆ ತೆರೆದಾಳ ಬಿಜೆಪಿ ಶಾಸಕ ಸಿದ್ದು ಸವದಿಯವರು ಮಹಿಳಾ ಸದಸ್ಯೆಯೊಬ್ಬರನ್ನು ಎಳೆದಾಡಿ ಅಸಭ್ಯ ವರ್ತನೆ ತೋರಿದ್ದಾರೆಂಬ ಆರೋಪಗಳು ಕೇಳಿಬಂದಿವೆ.

ಬಾಗಲಕೋಟೆ: ಪುರಸಭೆಯ ಅಧ್ಯಕ್ಷ ಸ್ಥಾನ ಚುನಾವಣೆ ವೇಳೆ ತೆರೆದಾಳ ಬಿಜೆಪಿ ಶಾಸಕ ಸಿದ್ದು ಸವದಿಯವರು ಮಹಿಳಾ ಸದಸ್ಯೆಯೊಬ್ಬರನ್ನು ಎಳೆದಾಡಿ ಅಸಭ್ಯ ವರ್ತನೆ ತೋರಿದ್ದಾರೆಂಬ ಆರೋಪಗಳು ಕೇಳಿಬಂದಿವೆ.
ಇಂದು ಬಾಗಲಕೋಟೆ ಜಿಲ್ಲೆಯ ಮಹಲಿಂಗಪುರ ಪುರಸಬೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿತ್ತು. ಈ ವೇಳೆ ಅಧ್ಯಕ್ಷೆ ಆಕಾಂಕ್ಷಿ ಮಹಿಳೆ ಸವಿತಾ ಹುರಕಡ್ಲಿಯವರನ್ನು ಶಾಸಕ ಸಿದ್ದು ಸವದಿಯವರು ಎಳೆದ್ದಾರೆಂದು ಹೇಳಲಾಗುತ್ತಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಬಿಜೆಪಿ ಸದಸ್ಯೆ ಸವಿತಾ ಹುರಕಡ್ಲಿ ಕಾಂಗ್ರೆಸ್'ಗೆ ಬೆಂಬಲಿಸಲು ಮುಂದಾದಾಗ ಶಾಸಕ ಸಿದ್ದು ಸವದಿಯವರು ಮಹಿಳೆಯನ್ನು ತಳ್ಳಾಡಿ ಅಸಭ್ಯ ವರ್ತನೆ ತೋರಿದ್ದಾರೆಂದು ಹೇಳಲಾಗುತ್ತಿದೆ. ನೂಕಾಟದ ಮಧ್ಯೆ ಮಹಿಳಾ ಸದಸ್ಯೆ ಕೆಳಕ್ಕೆ ಬಿದ್ದಿದ್ದು, ಶಾಸಕರ ಈ ವರ್ತನೆಗೆ ಆಕ್ರೋಶಗಳು ವ್ಯಕ್ತವಾಗತೊಡಗಿವೆ.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸವಿತಾ ಹುರಕಡ್ಲಿಯವರ ಪುತ್ರಿ ಸೌಮ್ಯ ಹುರಕಡ್ಲಿಯವರು, ನಮ್ಮ ತಾಯಿಯನ್ನು ಎಳೆದಾಡಿದ್ದರು. ಮೂವರು ಮಹಿಳಾ ಸದಸ್ಯರನ್ನೂ ಎಳೆದಾಡಿದ್ದಾರೆ. ಇದೀಗ ನಮ್ಮ ತಾಯಿ ಆಸ್ಪತ್ರೆಯಲ್ಲಿದ್ದಾರೆ. ಆಸ್ಪತ್ರೆಗೆ ದಾಖಲಾದರೂ ಸೌಜನ್ಯಕ್ಕೆ ಆದರೂ ಸಿದ್ದು ಸವದಿ ಬಂದು ಮಾತನಾಡಿಸಿಲ್ಲ. ನಮ್ಮ ತಂದೆ ತಾಯಿ ಕಳೆದ 20 ವರ್ಷಗಳಿಂದ ರಾಜಕಾರಣ ಮಾಡುತ್ತಿದ್ದಾರೆ. ಆದರೆ, ಒಂದು ಬಾರಿಯೂ ಅಧ್ಯಕ್ಷ ಸ್ಥಾನ ನೀಡಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


