ರಾಜ್ಯ

ಹುಬ್ಬಳ್ಳಿ ಪೊಲೀಸ್ ಕಮಿಷನರ್ ಆರೋಗ್ಯದಲ್ಲಿ ಏರುಪೇರು: ತಡರಾತ್ರಿ ಮಣಿಪಾಲ್ ಆಸ್ಪತ್ರೆಗೆ ಏರ್ ಲಿಫ್ಟ್

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಪೊಲೀಸ್ ಆಯುಕ್ತ ಲಾಬೂರಾಮ್ ಅವರನ್ನು ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ.

ಹುಬ್ಬಳ್ಳಿ ಪೊಲೀಸ್ ಕಮಿಷನರ್ ಆರೋಗ್ಯದಲ್ಲಿ ಏರುಪೇರು: ತಡರಾತ್ರಿ ಮಣಿಪಾಲ್ ಆಸ್ಪತ್ರೆಗೆ ಏರ್ ಲಿಫ್ಟ್
ಲಾಬೂ ರಾಮ್
Published On :

ಹುಬ್ಬಳ್ಳಿ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಪೊಲೀಸ್ ಆಯುಕ್ತ ಲಾಬೂರಾಮ್ ಅವರನ್ನು ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಲಾಬೂರಾಮ್ ದಾಖಲಾಗಿದ್ದರು, ಆದರೆ ಆರೋಗ್ಯ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮಧ್ಯರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಅಕ್ಟೋಬರ್ 22 ರಂದು ಆರ್-ದಿಲೀಪ್ ಬೆಂಗಳೂರಿಗೆ ವರ್ಗಾವಣೆಯಾದ 2004  ಬ್ಯಾಚ್ ಐಪಿಎಸ್ ಅಧಿಕಾರಿ ಲಾಬೂ ರಾಮ್ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು.

ಗಂಟಲುನೋವಿನ ಹಿನ್ನೆಲೆಯಲ್ಲಿ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಕಳೆದ ಕೆಲವು ದಿನಗಳಿಂದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಶಸ್ತ್ರ ಚಿಕಿತ್ಸೆ ನಂತರ ಕಳೆದ ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಅವರನ್ನು ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಹುಬ್ಬಳ್ಳಿ ಏರ್ ಪೋರ್ಟ್ ಮತ್ತು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅನುಮತಿ ಪಡೆದ ನಂತರ, ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಮಾನ ಬಂದಿತು. ರಾತ್ರಿ ಸುಮಾರು 2.30 ರ ವೇಳೆಗೆ ವಿಮಾನ ಬೆಂಗಳೂರು ತಲುಪಿದ್ದು, ಆ್ಯಂಬುಲೆನ್ಸ್ ನಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸುಧಾರಿಸುತ್ತಿದ್ದು, ಆತಂಕ ಪಡುವ ಅಗತ್ವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.