ಮೂವರು ಮಕ್ಕಳಿಗೆ ನೇಣು ಬಿಗಿದು ತಂದೆಯೂ ಆತ್ಮಹತ್ಯೆ, ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ
ಮೂವರು ಮಕ್ಕಳನ್ನು ನೇಣು ಬಿಗಿದು ಬಳಿಕ ತಂದೆಯೂ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ನಗರದ ಮೈಕೋ ಲೇಔಟ್ ನ ರಮಣಶ್ರೀ ಎನ್ ಕ್ಲೇವ್ ಬಳಿ ಶುಕ್ರವಾರ ನಡೆದಿದೆ.

ಬೆಂಗಳೂರು: ಮೂವರು ಮಕ್ಕಳನ್ನು ನೇಣು ಬಿಗಿದು ಬಳಿಕ ತಂದೆಯೂ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ನಗರದ ಮೈಕೋ ಲೇಔಟ್ ನ ರಮಣಶ್ರೀ ಎನ್ ಕ್ಲೇವ್ ಬಳಿ ಶುಕ್ರವಾರ ನಡೆದಿದೆ.
ಸರಸ್ವತಿ (14), ಹೇಮತಿ (11), ರಾಜ್ ಕುಮಾರ್ (3) ಮೃತ ಮಕ್ಕಳು. 32 ವರ್ಷದ ಜನಕರಾಜ್ ಬಿಸ್ತಾ ಎಂಬುವವರು ತಮ್ಮ ಮೂವರು ಮಕ್ಕಳನ್ನು ನೇಣು ಬಿಗಿದು ಬಳಿಕ ತಾವು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ಜನಕರಾಜ್ ಬಿಸ್ತಾ ಅವರು ರಮಣಶ್ರೀ ಎನ್ ಕ್ಲೇವ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಎರಡು ತಿಂಗಳ ಹಿಂದಷ್ಟೇ ಜನಕರಾಜ್ ಅವರ ಪತ್ನಿ ನಂದಾದೇವಿ ಆತ್ಮಹತ್ಯೆಗೆ ಶರಣಾಗಿದ್ದರು. ಆದ್ದರಿಂದ ಮಕ್ಕಳನ್ನು ನೋಡಿಕೊಳ್ಳಲಾರದೇ ಜೀವನದಲ್ಲಿ ಜುಗುಪ್ಸೆಗೊಂಡು ಜನಕರಾಜ್ ತಮ್ಮ ಮಕ್ಕಳನ್ನು ನೇಣಿಗೆ ಹಾಕಿ ತಾವು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ, ನಾಲ್ವರ ಮೃತದೇಹಗಳನ್ನು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


