ಕೆಜಿ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಲುಕ್ ಔಟ್ ನೋಟಿಸ್
ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ವಿರುದ್ದ ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ. ಅವರನ್ನು ಪತ್ತೆ ಹಚ್ಚಲು ಪೊಲೀಸರ ನಾಲ್ಕೈದು ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ವಿರುದ್ದ ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ. ಅವರನ್ನು ಪತ್ತೆ ಹಚ್ಚಲು ಪೊಲೀಸರ ನಾಲ್ಕೈದು ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ನಡುವೆ ಮೈಸೂರು, ನಾಗರಹೊಳೆ, ತಮಿಳುನಾಡು, ಕೇರಳ ಸೇರಿ ಮುಂಬೈನಲ್ಲೂ ಸಿಸಿಬಿ ಹುಡುಕಾಡುತ್ತಿದೆ. ಆದರೆ ಪೊಲೀಸರಿಗೆ ಇನ್ನೂ ಸಂಪತ್ ರಾಜ್ ಎಲ್ಲಿದ್ದಾರೆ ಅನ್ನೋ ಮಾಹಿತಿ ಸಿಕ್ಕಿಲ್ಲ. ಸಂಪತ್ ರಾಜ್ ಜವಾಬ್ದಾರಿಯುತ ನಾಗರಿಕನಾಗಿ ಬಂದು ಶರಣಾಗಬೇಕೆಂದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
ಅವರಿಂದ ಸಾಕಷ್ಟು ಜನರಿಗೆ ತೊಂದರೆ ಉಂಟಾಗಿದೆ. ಸಾರ್ವಜನಿಕರ ಆಸ್ತಿಪಾಸ್ತಿ ಹಾಳಾಗಿದೆ. ಸಂಪತ್ ರಾಜ್ ವಿದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅವರ ವಿರುದ್ದ ಲುಕ್ ಔಟ್ ನೊಟೀಸ್ ಹೊರಡಿಸಲಾಗಿದೆ ಇನ್ನು ಟೆಕ್ನಿಕಲ್ ಜಾಣ ನಡೆ ಇಟ್ಟಿರುವ ಸಂಪತ್ ರಾಜ್ ಫೋನ್ ಬಳಸದೆ, ಯಾರನ್ನೂ ಸಂಪರ್ಕಿಸದೆ ಅಜ್ಞಾತವಾಗಿದ್ದುಕೊಂಡು ಪೊಲೀಸರಿಗೆ
ಚಳ್ಳೆಹಣ್ಷು ತಿನ್ನಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


