ಪತ್ರಕರ್ತ ರವಿ ಬೆಳಗೆರೆ ಪಂಚಭೂತಗಳಲ್ಲಿ ಲೀನ
ಅಕ್ಷರ ಮಾಂತ್ರಿಕ ರವಿ ಬೆಳಗೆರೆ ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

ಬೆಂಗಳೂರು: ಅಕ್ಷರ ಮಾಂತ್ರಿಕ ರವಿ ಬೆಳಗೆರೆ ಪಂಚಭೂತಗಳಲ್ಲಿ ಲೀನವಾಗಿದ್ದಾರೆ.
ಹೃದಯಾಘಾತದಿಂದ ನಿಧನವಾಗಿದ್ದ ರವಿ ಬೆಳಗೆರೆ ಅವರ ಅಂತ್ಯ ಸಂಸ್ಕಾರವನ್ನು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ಬ್ರಾಹ್ಮಣ ಪದ್ದತಿಯಂತೆ ನೆರವೇರಿಸಲಾಗಿದೆ.
ಪುತ್ರರಾದ ಕರ್ಣ ಹಾಗೂ ಹಿಮವಂತ ರವಿ ಅವರ ಚಿತೆಗೆ ಅಗ್ನಿ ಸ್ಪರ್ಷ ಮಾಡಿದ್ದಾರೆ. ಶಿವರಾಂ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳ ನೇತೃತ್ವ ವಹಿಸಿದ್ದರು.
ಗುರುವಾರ ತಡರಾತ್ರಿ ನಿಧನರಾಗಿದ್ದ ಪತ್ರಕರ್ತ ರವಿ ಬೆಳಗೆರೆ ಅವರ ಪ್ರಾರ್ಥಿವ ಶರೀರವನ್ನು ಕನಕಪುರ ರಸ್ತೆಯ ಕರಿಷ್ಮಾ ಹಿಲ್ಸ್ ಮನೆಗೆ ತಂದು ಬಳಿಕ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಪದ್ಮನಾಭ ನಗರದಲ್ಲಿರೋ ಪ್ರಾರ್ಥನಾ ಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


