ನಾಡಿನ ಜನತೆಗೆ ಮುಖ್ಯಮಂತ್ರಿ ದೀಪಾವಳಿ ಶುಭಾಶಯ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾಡಿನ ಸಮಸ್ತ ಜನತೆಗೆ ನರಕ ಚತುರ್ದಶಿ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಹೇಳಿದ್ದಾರೆ.
ಬೆಳಕಿನ ಹಬ್ಬ ದೀಪಾವಳಿಯು ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಹೊತ್ತು ತರಲಿ. ರಾಜ್ಯವನ್ನು ಕಾಡುತ್ತಿರುವ ಕರೋನಾ ಸಾಂಕ್ರಾಮಿಕದಿಂದ ಮುಕ್ತಿ ದೊರೆತು ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಲಿ. ಪರಿಸರ ಸ್ನೇಹಿಯಾಗಿ, ಸುರಕ್ಷಿತವಾಗಿ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬವನ್ನು ಆಚರಿಸೋಣ. ಸರ್ವರಿಗೂ ದೀಪಾವಳಿಯ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಪಂಡಿತ್ ನೆಹರೂ ಜನ್ಮದಿನ: ಮುಖ್ಯಮಂತ್ರಿ, ಗಣ್ಯರಿಂದ ಶುಭಾಶಯ
ದೇಶದಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜನ್ಮದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ನಮನ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಷ್ಟ್ರದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಗೌರವಪೂರ್ಣ ನಮನಗಳು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮತ್ತು ದೇಶದ ಪ್ರಥಮ ಪ್ರಧಾನಿಯಾಗಿ ಅವರು ನೀಡಿದ ಕೊಡುಗೆಗಳು ಅವಿಸ್ಮರಣೀಯ. ಎಲ್ಲ ಮಕ್ಕಳಿಗೂ ಮಕ್ಕಳ ದಿನಾಚರಣೆಯ ಶುಭಾಶಯಗಳು ಎಂದು ತಿಳಿಸಿದ್ದಾರೆ.
ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಪ್ರೀತಿಯ ಶುಭಾಶಯಗಳು. ನಾಳಿನ ಭವ್ಯ ಭಾರತಕ್ಕಾಗಿ ಇಂದಿನ ಮಕ್ಕಳ ಸಮರ್ಪಕ ಪೋಷಣೆ, ರಕ್ಷಣೆ ಮತ್ತು ಶಿಕ್ಷಣ ನಮ್ಮೆಲ್ಲರ ಹೊಣೆಯಾಗಿದೆ. ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಅವರ ಸರ್ವತೋಮುಖ ಬೆಳವಣಿಗೆಗೆ ಅವಕಾಶ ಕಲ್ಪಿಸೋಣ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


