ಚಿತ್ರದುರ್ಗ ಬಳಿ ಸರಣಿ ಅಪಘಾತ: ಇಬ್ಬರ ದಾರುಣ ಸಾವು
ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪಟ್ರೇಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ, ಇಬ್ಬರೂ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಸಂಭವಿಸಿದೆ.

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪಟ್ರೇಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ, ಇಬ್ಬರೂ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಸಂಭವಿಸಿದೆ.
ಮೃತರನ್ನು ಹಾವೇರಿ ಮೂಲದ ಲತಾ (28) ಮತ್ತು ಬೆಂಗಳೂರಿನ ಅತ್ತಿಬೆಲೆ ನಿವಾಸಿ ಟಾಟಾ ಏಸ್ ಚಾಲಕ ಶಶಿಕುಮಾರ್ (26) ಎಂದು ಗುರುತಿಸಲಾಗಿದೆ.
ಖಾಸಗಿ ಬಸ್ಸು, ಇಂಡಿಕಾ ಕಾರು, ಮಾರುತಿ ಆಮ್ನಿ, ಕ್ಯಾಂಟರ್ ಹಾಗೂ ಟಾಟಾ ಏಸ್ ನಡುವೆ ಸರಣಿ ಅಪಘಾತ ಹೆದ್ದಾರಿಯ ಗ್ರೀನ್ ಲ್ಯಾಂಡ್ ಹೋಟೆಲ್ ಸಮೀಪ ಸರಣಿ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಓಮಿನಿ ಕಾರು ಹಾಗೂ ಟಾಟಾ ಏಸ್ ವಾಹನದಲ್ಲಿದ್ದವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಶ್ರುತಿ (3), ಜ್ಯೋತಿ (25), ಜಾಗೃತಿ (4), ದ್ಯಾಮಣ್ಣ (24) ವರ್ಷ ಎಂಬುವವರು ಗಂಭೀರ ಗಾಯಗೊಂಡಿದ್ದು, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


