ಬೆಂಗಳೂರು: ಪಟಾಕಿ ಸಿಡಿಸಿದ್ದ 10 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು
ನಿನ್ನೆ ದೀಪಾವಳಿ ಪ್ರಯುಕ್ತ ಪಟಾಕಿ ಸಿಡಿಸಲು ಹೋಗಿ ಸುಮಾರು 10 ಮಕ್ಕಳು ಗಾಯಗೊಂಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಬೆಂಗಳೂರು: ನಿನ್ನೆ ದೀಪಾವಳಿ ಪ್ರಯುಕ್ತ ಪಟಾಕಿ ಸಿಡಿಸಲು ಹೋಗಿ ಸುಮಾರು 10 ಮಕ್ಕಳು ಗಾಯಗೊಂಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಸಿರು ಪಟಾಕಿ ಸಿಡಿಸಲು ಅವಕಾಶ ನೀಡಿದ್ದರೂ, ಹಾನಿ ಸಂಭವಿಸಿದೆ. ನಿನ್ನೆ ಸುಮಾರು 10 ಮಕ್ಕಳು ಗಾಯಗೊಂಡಿದ್ದು, ನಗರದ ಮಿಂಟೋ ಆಸ್ಪತ್ರೆ, ನಾರಾಯಣ ಆಸ್ಪತ್ರೆ, ನೇತ್ರಧಾಮ ಸೇರಿ ಇತರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಪೈಕಿ ನಾಲ್ವರಿಗೆ ತೀವ್ರ ಗಾಯಗಳಾಗಿವೆ. ಇನ್ನೂ, ವಿಜಯನಂದ ನಗರದ 12 ವರ್ಷದ ಬಾಲಕನಿಗೆ ಫ್ಲವರ್ ಪಾಟ್ ಪಟಾಕಿಯಿಂದ ಕಣ್ಣಿಗೆ ಹಾನಿಯಾಗಿದ್ದು, ಮಿಂಟೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


