ಲಿಂಗಾಯತ ನಿಗಮದ ಬೆನ್ನಲ್ಲೆ ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ ಒತ್ತಾಯ
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಆದೇಶ ಮಾಡಿದ ಬೆನ್ನಲ್ಲೇ ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಗೂ ಕೂಗು ಕೇಳಿ ಬಂದಿದೆ.

ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಆದೇಶ ಮಾಡಿದ ಬೆನ್ನಲ್ಲೇ ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಗೂ ಕೂಗು ಕೇಳಿ ಬಂದಿದೆ.
ಇಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಮಾತನಾಡಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ನಿರ್ಧಾರ ಸ್ವಾಗತಾರ್ಹ. ಲಿಂಗಾಯತ ಅಭಿವೃಧ್ಧಿ ನಿಗಮಕ್ಕೆ ನಮ್ಮ ತಕರಾರು ಇಲ್ಲ. ಅದೇ ರೀತಿ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ರಚಿಸಲಿ ಎಂದು ಆಗ್ರಹಿಸಿದ್ದಾರೆ.
ಈ ಸಂಬಂಧ ಸದ್ಯದಲ್ಲೇ ಮುಖ್ಯಮಂತ್ರಿಗಳನ್ನು ಒಕ್ಕಲಿಗ ಸಮುದಾಯದ ನಾಯಕರು ಭೇಟಿ ಮಾಡಿ ಒತ್ತಾಯಿಸುತ್ತೇವೆ. ವೀರಶೈವ ಲಿಂಗಾಯತ ಸಮುದಾಯ ದೊಡ್ಡದು ಅದೇ ರೀತಿ ಒಕ್ಕಲಿಗ ಸಮುದಾಯವೂ ದೊಡ್ಡದು ಎಂದರು.
ಒಕ್ಕಲಿಗ ಸಮುದಾಯದಲ್ಲೂ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ. ಹಾಗಾಗಿ ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಗೆ ಒತ್ತಾಯಿಸಿ, ಸಮುದಾಯದ ಸಚಿವರು, ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ವಿಶ್ವನಾಥ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


