ನಾಳೆ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫಿ ಡೇ ಮಾಲೀಕ ದಿ.ಸಿದ್ಧಾರ್ಥ್ ಪುತ್ರ ಅಮರ್ತ್ಯ ಹೆಗಡೆ ಅವರ ನಿಶ್ಚಿತಾರ್ಥ ಗುರುವಾರ ನಡೆಯಲಿದೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫಿ ಡೇ ಮಾಲೀಕ ದಿ.ಸಿದ್ಧಾರ್ಥ್ ಪುತ್ರ ಅಮರ್ತ್ಯ ಹೆಗಡೆ ಅವರ ನಿಶ್ಚಿತಾರ್ಥ ಗುರುವಾರ ನಡೆಯಲಿದೆ.
ನಗರದ ಖಾಸಗಿ ಹೋಟೆಲ್ ನಲ್ಲಿ ಐಶ್ವರ್ಯ ಹಾಗೂ ಅಮರ್ತ್ಯ ಹೆಗಡೆಯವರ ನಿಶ್ಚಿತಾರ್ಥ ನೆರವೇರಲಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ಖಾಸಗಿ ಹೋಟೆಲ್ ನಲ್ಲಿ ನಿಶ್ಚಿತಾರ್ಥಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ನಿಶ್ಚಿತಾರ್ಥ ಕಾರ್ಯಕ್ರಮವನ್ನು ಸರಳವಾಗಿ ನೆರವೇರಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮಕ್ಕೆ ಕುಟುಂಬಸ್ಥರು ಹಾಗೂ ಆತ್ಮೀಯರಿಗಷ್ಟೇ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ನಿಶ್ಚಿತಾರ್ಥ ಸಮಾರಂಭದಲ್ಲಿ ಎಸ್.ಎಂ.ಕೃಷ್ಣ ಕುಟುಂಬಸ್ಥರು ಹಾಗೂ ಡಿಕೆ.ಶಿವಕುಮಾರ್ ಕುಟುಂಬಸ್ಥರು ಭಾಗಿಯಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


