ಚಂದನವಾಹಿನಿಯಲ್ಲಿ ನ.23 ರಿಂದ 5-7ನೇ ತರಗತಿಗೆ ಸಂವೇದಾ ಪಾಠ: ಸುರೇಶ್ ಕುಮಾರ್
ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ದೂರದರ್ಶನ ಚಂದನಾ ವಾಹಿನಿಯಲ್ಲಿ ನ.23 ರಿಂದ 5,6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗಾಗಿ ಸಂವೇದಾ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮಗಳು ಪ್ರಸಾರವಾಗಲಿವೆ.

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ದೂರದರ್ಶನ ಚಂದನಾ ವಾಹಿನಿಯಲ್ಲಿ ನ.23 ರಿಂದ 5,6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗಾಗಿ ಸಂವೇದಾ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮಗಳು ಪ್ರಸಾರವಾಗಲಿವೆ.
ಕೋವಿಡ್-19 ಪ್ರಸರಣದ ಹಿನ್ನೆಲೆಯಲ್ಲಿ ಶಾಲೆಗಳ ಆರಂಭ ವಿಳಂಬವಾಗುತ್ತಿರುವುದರಿಂದ ವಿದ್ಯಾರ್ಥಿಗಳ ಕಲಿಕಾ ನಿರಂತರತೆಗಾಗಿ ಸಂವೇದಾ ತರಗತಿಗಳನ್ನು 5,6 ಮತ್ತು 7ನೇ ತರಗತಿಗಳಿಗೂ ವಿಸ್ತರಿಸಲಾಗುತ್ತಿದ್ದು, ವಿದ್ಯಾ ರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
5, 6 ಮತ್ತು 7ನೇ ತರಗತಿಗಳಿಗೆ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲಿಷ್, ತೃತೀಯ ಭಾಷೆ ಹಿಂದಿ ಹಾಗೂ ಕನ್ನಡ ಮಾಧ್ಯಮದಲ್ಲಿ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನಗಳ ವಿಷಯಗಳಲ್ಲಿ ವಿಡಿಯೋ ಪಾಠಗಳ ವೇಳಾಪಟ್ಟಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಡಿಎಸ್ಇಆರ್ ಟಿ) ಬಿಡುಗಡೆ ಮಾಡಿದೆ. ತರಗತಿಗಳು ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 8 ರಿಂದ 9.30 ಮತ್ತು ಸಂಜೆ 5.30 ರಿಂದ 6 ಗಂಟೆಯವರೆಗೆ ಪ್ರಸಾರವಾಗಲಿವೆ. ಪ್ರತಿ ದಿನ 4 ಪಾಠಗಳನ್ನು, ಪ್ರತಿ ಪಾಠ 30 ನಿಮಿಷಗಳ ಅವಧಿಯಂತೆ 2 ಗಂಟೆಗಳ ಕಾಲ ನಡೆಸಿಕೊಡಲಾಗುವುದು ಎಂದು ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ತರಗತಿಗಳು ನಿಗದಿತ ವೇಳಾಪಟ್ಟಿಯಂತೆ ಡಿ.25ರವರೆಗೆ 5 ವಾರಗಳ ಕಾಲ ನಡೆಯಲಿವೆ. ಪ್ರಾಥಮಿಕ ಶಾಲಾ ಶಿಕ್ಷಕರು ಕಾರ್ಯಕ್ರಮದ ಅನುಪಾಲನೆ ಮಾಡಲಿದ್ದಾರೆ. ಈ ಪಾಠಗಳ ಕುರಿತಂತೆ ಆಯಾ ಜಿಲ್ಲೆಗಳ ಉಪನಿರ್ದೇ ಶಕರು ಮಕ್ಕಳಿಗೆ ತಲುಪುವಂತೆ ಹೆಚ್ಚಿನ ರೀತಿಯ ಪ್ರಚಾರ ಮಾಡಿ ಮಕ್ಕಳು ಸದುಪಯೋಗ ಪಡಿಸಿಕೊಳ್ಳಲು ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಸಂವೇದಾ ತರಗತಿಗಳು 8,9ಮತ್ತು10ನೇ ತರಗತಿಗಳಿಗೆ ನಡೆಯುತ್ತಿರುವುದನ್ನು ಗಮನಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


