ರಾಜ್ಯ

ಕೇಂದ್ರ ಸಚಿವೆಯರಿಗೆ ಅಚ್ಚರಿಯ ಉಡುಗೊರೆ ನೀಡಿದ ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಹಾಗೂ ಇತರೆ ಉನ್ನತ ನಾಯಕರಿಗೆ ದೀಪಾವಳಿ ಹಿನ್ನೆಲೆಯಲ್ಲಿ ವಿಶೇಷ ಉಡುಗೊರೋ ನೀಡಿದ್ದಾರೆ.

ಕೇಂದ್ರ ಸಚಿವೆಯರಿಗೆ ಅಚ್ಚರಿಯ ಉಡುಗೊರೆ ನೀಡಿದ ಸಂಸದೆ ಶೋಭಾ ಕರಂದ್ಲಾಜೆ
ಉಡುಪಿ ಸೀರೆಗಳನ್ನು ಖರೀದಿಸಿರುವ ಸಂಸದೆ ಶೋಭಾ
Published On :

ಬೆಂಗಳೂರು: ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಹಾಗೂ ಇತರೆ ಉನ್ನತ ನಾಯಕರಿಗೆ ದೀಪಾವಳಿ ಹಿನ್ನೆಲೆಯಲ್ಲಿ ವಿಶೇಷ ಉಡುಗೊರೋ ನೀಡಿದ್ದಾರೆ. 

ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಮನೇಕಾ ಗಾಂಧಿ, ಶೆಫಾಲಿ ವೈದ್ಯ, ದೇಬಶ್ರೀ, ಮೀನಾಕ್ಷಿ ಲೆಖಿ, ವನತಿ, ಡಿಎಂಕೆ ಕನಿಮೋಳಿ ಸೇರಿದಂತೆ ಹಲವರಿಗೆ ಉಡುಪಿ ಸೀರೆಗಳನ್ನು ಶೋಭಾ ಅವರು ಉಡುಗೊರೆಯಾಗಿ ನೀಡಿದ್ದಾರೆ. 

ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯವಾಗಿ ಉಡುಪಿ ಸೀರೆಗಳನ್ನು ಖರೀದಿಸಿರುವ ಶೋಭಾ ಅವರು ಬಿಜೆಪಿ ನಾಯಕರಿಗೆ ಉಡುಗೊರೆ ನೀಡು ಶುಭಕೋರಿದ್ದಾರೆ. ಈ ಮೂಲಕ ಉಡುಪಿ ಕೈಮಗ್ಗವನ್ನು ರಾಷ್ಟ್ರಮಟ್ಟದ ನಾಯಕರಿಗೂ ಮತ್ತೊಮ್ಮೆ ಪರಿಚಯಿಸುವ ಪ್ರಯತ್ನ ಮಾಡಿದ್ದಾರೆ. ಶೋಭಾ ಅವರು ನೀಡಿರುವ ಉಡುಗೊರೆ ಕುರಿತು ಟ್ವೀಟ್ ಮಾಡಿಸುವ ಶೆಫಾಲಿ ವೈದ್ಯ ಅವರು ಸಂತಸ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.