ರಾಜ್ಯ

ಡಿಸೆಂಬರ್ 7-15 ರವರೆಗೆ ಚಳಿಗಾಲ ಅಧಿವೇಶನ: ಬೆಳಗಾವಿ ಬದಲು ಬೆಂಗಳೂರಿನಲ್ಲೇ ನಡೆಸಲು ಸರ್ಕಾರ ನಿರ್ಧಾರ!

ಡಿಸೆಂಬರ್ 7 ರಿಂದ 15ರವರೆಗೆ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಬೆಂಗಳೂರಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಡಿಸೆಂಬರ್ 7-15 ರವರೆಗೆ ಚಳಿಗಾಲ ಅಧಿವೇಶನ: ಬೆಳಗಾವಿ ಬದಲು ಬೆಂಗಳೂರಿನಲ್ಲೇ ನಡೆಸಲು ಸರ್ಕಾರ ನಿರ್ಧಾರ!
ಸಿಎಂ ಯಡಿಯೂರಪ್ಪ
Published On :

ಬೆಂಗಳೂರು: ಡಿಸೆಂಬರ್ 7 ರಿಂದ 15ರವರೆಗೆ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಬೆಂಗಳೂರಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಆರಂಭದಲ್ಲಿ ಬೆಳಗಾವಿಯಲ್ಲಿ ನಡೆಸುವ ಚಿಂತನೆಯಿತ್ತು ಆದರೆ ಆರ್ಥಿಕ ಹಾಗೂ ಇತರೆ ಸಮಸ್ಯೆಗಳ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಇದೇ ವೇಳೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಸಂಬಂಧ ಸ್ಪಷ್ಟೀಕರಣ ನೀಡಿದ ಅವರು, ಅದು ಮರಾಠ ಅಭಿವೃದ್ಧಿ ಪ್ರಾಧಿಕಾರವಲ್ಲ, ಸಮುದಾಯ ಅಭಿವೃದ್ದಿ ನಿಗಮವಾಗಿದೆ. ಮರಾಠ ಅಭಿವೃದ್ಧಿ ಪ್ರಾಧಿಕಾರದ ಹೆಸರು ಬದಲಾವಣೆಗೆ ನಿರ್ಧರಿಸಿದ್ದು, ಇನ್ನು ಮುಂದೆ 'ಮರಾಠ ಸಮುದಾಯ ನಿಗಮ ' ಎಂದು ಬದಲಾವಣೆ ಯಾಗಲಿದೆ. ಮರಾಠ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಪ್ರಾಧಿಕಾರ ಮಾಡಬೇಕಾದರೆ ಕಾನೂನು ಮಾಡಬೇಕು.ಆದರೆ ನಿಗಮಕ್ಕೆ ಸರ್ಕಾರವೇ ನಿರ್ಧಾರ ಕೈಗೊಳ್ಳಬಹುದು. ಹಣ ಎಷ್ಟು ನಿಗದಿ ಮಾಡಬೇಕು ಎಂಬುದು ಇನ್ನೂ ಚರ್ಚೆಯಾಗಿಲ್ಲ. ಒಂದು ಸಮುದಾಯದ ಅಭಿವೃದ್ಧಿ ವಿಷಯದಲ್ಲಿ ಯಾಕೆ ವಿರೋಧ ಮಾಡುತ್ತಿದ್ದಾರೋ ಗೊತ್ತಿಲ್ಲ. ಆದರೂ ಅಭಿವೃದ್ಧಿಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು. 

ಪ್ರವಾಹ ಪೀಡಿತ ಜಿಲ್ಲೆಗಳಿಗೆ 1000 ಕೋಟಿ ರೂ. ಬಿಡುಗಡೆ ಮಾಡಲು ಸಂಪುಟ ತೀರ್ಮಾನಿಸಿದೆ. ನೆರೆ ಹಾಗೂ ಅತಿವೃಷ್ಠಿ ಸಂತ್ರಸ್ಥರ ಪರಿಹಾರ ಕಾಮಗಾರಿ ಕೈಗೊಳ್ಳಲು ನಿರ್ಧಾರ ಮಾಡಲಾಗಿದೆ. ಎಸ್‍ಸಿ- ಎಸ್‍ಟಿ ಮೀಸಲಾತಿ ಹೆಚ್ಚಳ ಸಂಬಂಧ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಲಾಗುತ್ತದೆ. ಒಂದು ವಾರದಲ್ಲಿ ಸಮಿತಿ ರಚನೆ ಮಾಡಲಾಗುತ್ತದೆ. ಸಮಿತಿ ವರದಿ ಆಧರಿಸಿ ಮೀಸಲು ಹೆಚ್ಚಳ ಮಾಡಲಾಗುತ್ತದೆ ಎಂದರು. ಸಮಿತಿಯ ಸದಸ್ಯರನ್ನು ಮುಖ್ಯಮಂತ್ರಿ ಅವರು ನೇಮಕ ಮಾಡಲಿದ್ದು ಒಂದೆರಡು ದಿನಗಳಲ್ಲಿ ಈ ಪ್ರಕ್ರಿಯೆ ನಡೆಯಲಿದೆ ಎಂದು ಅವರು ಹೇಳಿದರು.

ಕೃಷ್ಣಾ ಭಾಗ್ಯ ಜಲ ನಿಗಮ,ಕಾವೇರಿ ಅಭಿವೃದ್ಧಿ ನಿಗಮ ಮತ್ತು ವಿಶ್ವೇಶ್ವರಯ್ಯ ಅಭಿವೃದ್ಧಿ ನಿಗಮಕ್ಕೆ 1600 ಕೋಟಿ ರೂ. ಸಾಲ ಪಡೆಯಲು ಅನುಮತಿ ನೀಡಲಾಗಿದೆ. ಹೊಸಪೇಟೆಯಲ್ಲಿ 13 ಕೋಟಿ ಅಂದಾಜು ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು. ಸಾಲಿನಲ್ಲಿ 21 ಸಾರ್ವತ್ರಿಕ ರಜೆ ಮತ್ತು19 ನಿರ್ಬಂಧಿತ ರಜೆ ನೀಡಲು ಅನುಮೋದನೆ ಸಿಕ್ಕಿದ್ದು, ಲೋಕಸೇವಾ ಆಯೋಗದ ಅನುಮತಿ ಇಲ್ಲದೆ ಸರ್ಕಾರಿ ನೌಕರರ ಮೇಲೆ ಕ್ರಮ ಕೈಗೊಳ್ಳಲು ನಿಯಮಾವಳಿ ತಿದ್ದುಪಡಿ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.