ರಾಜ್ಯ

ಬೆಂಗಳೂರು: ಸರಣಿ ಅಪಘಾತದಲ್ಲಿ ಇಬ್ಬರ ದುರ್ಮರಣ

ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಳಿ ನಡೆದಿದೆ.

ಬೆಂಗಳೂರು: ಸರಣಿ ಅಪಘಾತದಲ್ಲಿ ಇಬ್ಬರ ದುರ್ಮರಣ
ಸಂಗ್ರಹ ಚಿತ್ರ
Published On :

ಬೆಂಗಳೂರು: ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಬಳಿ ನಡೆದಿದೆ.

ಬೈಕ್ ಸವಾರ ಹಾಗೂ ಓಮ್ನಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.‌ ಚಾಲಕನನ್ನು ಸುನೀಲ್ (28) ಎಂದು ಗುರುತಿಸಲಾಗಿದ್ದು, ಸದ್ಯ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ.

ಲಾರಿ ಚಾಲಕ ಏಕಾಏಕೀ ಬ್ರೇಕ್ ಹಾಕಿದ ಪರಿಣಾಮ ಲಾರಿಗೆ ಓಮ್ನಿ ಡಿಕ್ಕಿ ಹೊಡೆದಿದೆ. ಓಮ್ನಿ ಕಾರಿನ ಹಿಂದೆ ಬರುತ್ತಿದ್ದ ಬೈಕ್ ಓಮ್ನಿಗೆ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಅಪಘಾತ ಸಂಭವಿಸುತ್ತಿದ್ದಂತೆ  ಚಾಲಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.