ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಹಸುಗೂಸು ಅಪಹರಿಸಿ ಮಾರಾಟ: ಇಬ್ಬರ ಬಂಧನ
ವಾಣಿ ವಿಲಾಸ್ ಆಸ್ಪತ್ರೆಯ ಸಿಬ್ಬಂದಿ ಯಡವಟ್ಟಿನಿಂದ ಮಗು ಅಪಹರಿಸಿ ಮಾರಾಟ ಮಾಡಿದ್ದ ಮಹಿಳೆ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ವಾಣಿ ವಿಲಾಸ್ ಆಸ್ಪತ್ರೆಯ ಸಿಬ್ಬಂದಿ ಯಡವಟ್ಟಿನಿಂದ ಮಗು ಅಪಹರಿಸಿ ಮಾರಾಟ ಮಾಡಿದ್ದ ಮಹಿಳೆ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ನ. 9 ರಂದು ವಾಣಿವಿಲಾಸ್ ಆಸ್ಪತ್ರೆಯಲ್ಲಿ ಅಬ್ದುಲ್ ರಶೀದ್ ದಂಪತಿಗೆ ಮಗು ಜನಿಸಿತ್ತು. ಮಗುವಿನ ಶ್ವಾಸಕೋಶದಲ್ಲಿ ನೀರು ಶೇಖರಣೆ ಆಗಿದ್ದರಿಂದ ಮಗುವನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು.
ನ. 11 ರಂದು ಮಗುವಿನ ಆರೋಗ್ಯದಲ್ಲಿ ಚೇತರಿಕೆಯಾಗಿದ್ದರಿಂದ ಮಗುವನ್ನು ತಾಯಿ ಬಳಿ ಕರೆದುಕೊಂಡು ಹೋಗುವಂತೆ ಆಸ್ಪತ್ರೆಯಲ್ಲಿ ಹೇಳಲಾಗಿತ್ತು.ಈ ವೇಳೆ ಮಹಿಳೆಯೊಬ್ಬಳು ಆಗಮಿಸಿ ತಾನು ಮಗುವಿನ ಅಜ್ಜಿ ಎಂದು ಹೇಳಿ, ಮಗುವನ್ನು ಕದ್ದು ಪರಾರಿಯಾಗಿದ್ದಳು.
ನಂತರ ಮಗು ಕಾಣಿಸದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾದ ಮಗುವಿನ ಪೋಷಕರು ಆಸ್ಪತ್ರೆ ಸಿಬ್ಬಂದಿಯನ್ನು ಪ್ರಶ್ನಿಸಿದ್ದರು. ಈ ವೇಳೆ ಸಿಬ್ಬಂದಿ ಸಿಸಿಟಿವಿ ಪರಿಶೀಲನೆ ಮಾಡಿದಾಗ ಮಗು ಕಳವು ಆಗಿರುವುದು ಬೆಳಕಿಗೆ ಬಂದಿತ್ತು. ನಂತರ ಆಸ್ಪತ್ರೆ ಸಿಬ್ಬಂದಿ ಹಾಗೂ ಮಗುವಿನ ಪೋಷಕರು ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರಿನನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು ಮಹಿಳೆ ಸೇರಿ ಇಬ್ಬರೂ ಆರೋಪಿಗಳನ್ನು ಬಂಧಿಸಿ, ಮಗುವನ್ನು ಸುರಕ್ಷಿತವಾಗಿ ಪೋಷಕರ ವಶಕ್ಕೆ ನೀಡಿದ್ದಾರೆ. ಆರೋಪಿ ಮಹಿಳೆ ಕುಮಾರಸ್ವಾಮಿ ಲೇಔಟ್ ನಲ್ಲಿ ದಂಪತಿಗೆ 80 ಸಾವಿರ ರೂಪಾಯಿಗೆ ಮಗು ಮಾರಾಟ ಮಾಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


