ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮತ್ತೊಮ್ಮೆ ಸಿಬಿಐ ಸಮನ್ಸ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದೆ.

ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರಿನಲ್ಲಿಂದು ಈ ಬಗ್ಗೆ ತಿಳಿಸಿದ ಶಿವಕುಮಾರ್, ಬೆಂಗಳೂರು ಸಿಬಿಐ ಕಚೇರಿಯಿಂದ ಅಕ್ಟೋಬರ್ 5 ರಂದು ತಮ್ಮ ನಿವಾಸದ ಮೇಲೆ ನಡೆದಿದ್ದ ದಾಳಿ ಸಂಬಂಧ ತಮಗೆ ನ.19 ರಂದು ಸಮನ್ಸ್ ಜಾರಿಯಾಗಿರುವುದು ನಿಜ. ನವೆಂಬರ್ 23 ರಂದು ಹಾಜರಾಗಲು ಸೂಚಿಸಿದ್ದಾರೆ ಎಂದು ತಿಳಿಸಿದರು.
ಇದೇ ಮೊದಲ ಬಾರಿಗೆ ಸಿಬಿಐ ನೋಟಿಸ್ ಸಮನ್ಸ್ ನೀಡಿದೆ. ನ.19ರಂದು ಮಗಳ ನಿಶ್ಚಿತಾರ್ಥದಲ್ಲಿ ಭಾಗಿಯಾಗಿದ್ದರಿಂದ ಸಿಬಿಐ ಕಚೇರಿಗೆ ಹಾಜರಾಗಲಾಗಲಿಲ್ಲ ಹಾಗೂ ನ.22 ರಿಂದ ತಾವು ಉತ್ತರ ಕರ್ನಾಟಕ ಪ್ರವಾಸದಲ್ಲಿರುವುದರಿಂದ ಅಂದು ಕೂಡ ಹಾಜರಾಗಲು ಆಗುವುದಿಲ್ಲ. ಅದರ ಬದಲಾಗಿ ನ.25 ರಂದು ಸಂಜೆ 4 ಗಂಟೆಗೆ ಸಿಬಿಐ ಕಚೇರಿ ವಿಚಾರಣೆಗೆ ಹಾಜರಾಗುವುದಾಗಿ ಮನವಿ ಮಾಡಿದ್ದು ಇದಕ್ಕೆ ಸಿಬಿಐ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


