ಪ್ರತಿ ಹಳ್ಳಿಯಲ್ಲಿ ಜನೌಷಧ ಮಳಿಗೆ ಸ್ಥಾಪನೆ: ಎಸ್.ಟಿ. ಸೋಮಶೇಖರ್
ಗ್ರಾಮೀಣ ಪ್ರದೇಶದ ಜನಾರೋಗ್ಯದ ಸಲುವಾಗಿ ಪ್ರತಿಹಳ್ಳಿಯಲ್ಲಿ ಜನೌಷಧ ಮಳಿಗೆಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸಹಕಾರ ಇಲಾಖೆ ಚಿಂತನೆ ನಡೆಸಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಹೇಳಿದ್ದಾರೆ.

ವಿಜಯಪುರ: ಗ್ರಾಮೀಣ ಪ್ರದೇಶದ ಜನಾರೋಗ್ಯದ ಸಲುವಾಗಿ ಪ್ರತಿಹಳ್ಳಿಯಲ್ಲಿ ಜನೌಷಧ ಮಳಿಗೆಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸಹಕಾರ ಇಲಾಖೆ ಚಿಂತನೆ ನಡೆಸಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಹೇಳಿದ್ದಾರೆ.
ವಿಜಯಪುರ ಜಿಲ್ಲಾ ಸಹಕಾರಿ ಸಂಘಗಳ ಒಕ್ಕೂಟ ಸೇರಿದಂತೆ ವಿವಿಧ ಸಹಕಾರ ಸಂಘಗಳ ಆಶ್ರಯದಲ್ಲಿ ಜರುಗಿದ 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಗ್ರಾಮೀಣ ಭಾಗದಲ್ಲಿಯೇ ಹೆಚ್ಚು ಆದ್ಯತೆ ಮೇರೆಗೆ ಜನೌಷಧ ಮಳಿಗೆಗಳನ್ನು ಆರಂಭಿಸಿ ಅವರಿಗೆ ಕಡಿಮೆ ದರದಲ್ಲಿ ಔಷಧ ಪಡೆಯುವ ಸೌಲಭ್ಯವನ್ನು ಇಲಾಖೆ ಶೀಘ್ರದಲ್ಲಿಯೇ ರೂಪಿಸಿ ಅನುಷ್ಠಾನಗೊಳಿಸಲಿದೆ. ಗ್ರಾಮೀಣ ಜನತೆಗೆ ಈ ಜನೌಷಧ ಮಳಿಗೆಗಳು ವರದಾನವಾಗಲಿವೆ ಎಂದರು.
ಮೊದಲು ಸಹಕಾರ ಸಂಘಗಳ ಸಾಧನೆಯ ವಿಷಯ ಬಂದಾಗ ಗುಜರಾತ್, ಮಹಾರಾಷ್ಟ್ರ ರಾಜ್ಯಗಳ ಹೆಸರು ಮುಂಚೂಣಿಯಲ್ಲಿ ಇರುತ್ತಿತ್ತು. ಆದರೆ ಇದೀಗ ಕರ್ನಾಟಕ ರಾಜ್ಯವು ಸಹಕಾರ ರಂಗದಲ್ಲಿ ನಂಬರ್ 1 ಸ್ಥಾನದಲ್ಲಿದೆ. ರಾಷ್ಟ್ರಮಟ್ಟದಲ್ಲಿ ಸಹಕಾರ ಸಂಘಗಳ ಸಾಧನೆಯ ವಿಷಯ ಬಂದಾಗ ಕರ್ನಾಟಕದ ಸ್ಥಾನ ಅಗ್ರಗಣ್ಯವಾಗಿದೆ. ಮುಂದಿನ ಸಹಕಾರಿ ಸಪ್ತಾಹದಲ್ಲಿ ಪ್ರತಿ ಜಿಲ್ಲೆಯ ಉತ್ತಮ ಸಹಕಾರಿ ಸಂಸ್ಥೆ ಕುರಿತ ಕಿರು ಹೊತ್ತಿಗೆ ಹೊರ ತರಲು ಚಿಂತನೆ ನಡೆಸಲಾಗುತ್ತಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


