ಬಲವಂತದ ಬಂದ್ ಗೆ ಅವಕಾಶ ಕೊಡುವುದಿಲ್ಲ; ಕೆಟ್ಟದಾಗಿ ನಡೆದುಕೊಂಡರೆ ಕ್ರಮ ನಿಶ್ಚಿತ: ಮುಖ್ಯಮಂತ್ರಿ ಎಚ್ಚರಿಕೆ
ಬಲವಂತದಿಂದ ಎಲ್ಲೂ ಬಂದ್ ಮಾಡಲು ತಾವು ಅವಕಾಶ ಕೊಡುವುದಿಲ್ಲ ಎಂದು ಡಿಸೆಂಬರ್ 5ರಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಬಲವಂತದಿಂದ ಎಲ್ಲೂ ಬಂದ್ ಮಾಡಲು ತಾವು ಅವಕಾಶ ಕೊಡುವುದಿಲ್ಲ ಎಂದು ಡಿಸೆಂಬರ್ 5ರಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಕನ್ನಡದ ಪರವಾಗಿ, ಕನ್ನಡಿಗರ ಪರವಾಗಿ ಇರುವಂಥವನು, ಕನ್ನಡಿಗರಿಗೆ ಬೇಕಾದ ಹೆಚ್ಚಿನ ಸೌಲಭ್ಯ ಒದಗಿಸಲು ತಾವು ಸಿದ್ಧ. ಬೇರೆ ಬೇರೆ ಕಾರಣಗಳಿಗಾಗಿ ಬಂದ್ ಕರೆ ಕೊಡುವುದು ಸೂಕ್ತ ಅಲ್ಲ. ರಾಜ್ಯದ ಜನ ಇದನ್ನು ಮೆಚ್ಚುವುದಿಲ್ಲ. ಬಲವಂತದಿಂದ ಎಲ್ಲೂ ಬಂದ್ ಮಾಡಲು ತಾವು ಅವಕಾಶ ಕೊಡುವುದಿಲ್ಲ ಎಂದು ಸ್ಪಷ್ಪಪಡಿಸಿದರು.
ಪ್ರತಿಭಟನಕಾರರು ಪ್ರತಿಕೃತಿ ದಹನ ಮಾಡುವುದು, ಕೆಟ್ಟದಾಗಿ ನಡೆದುಕೊಳ್ಳುತ್ತಿರುವುದನ್ನು ಗಮನಿಸುತ್ತಿದ್ದೇನೆ, ಇಂತಹವರ ವಿರುದ್ಧ ಬಹಳ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ, ಪ್ರತಿಭಟನೆಗೆ ಬೇರೆ ಸ್ಚರೂಪ ಕೊಡುವುದು ಸರಿಯಲ್ಲ. ಎಲ್ಲ ವರ್ಗಗಳಿಗೂ ಸರ್ಕಾರ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆ. ಸರ್ಕಾರ ಯಾರ ನಡುವೆಯೂ ಭೇದ ಭಾವ ಮಾಡುತ್ತಿಲ್ಲ. ಸರ್ಕಾರದ ಉದ್ದೇಶ ಅರ್ಥ ಮಾಡಿಕೊಂಡು ಸಹಕಾರ ಕೊಡಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


