ತಾಯಿ ಕಳೆದುಕೊಂಡು ಅನಾಥವಾಗಿದ್ದ ಎರಡು ಹುಲಿ ಮರಿಗಳ ರಕ್ಷಣೆ
ತಾಯಿ ಕಳೆದುಕೊಂಡು ಅನಾಥವಾಗಿದ್ದ ಎರಡು ಮರಿ ಹುಲಿಗಳನ್ನು ರಕ್ಷಿಸಿರುವ ಘಟನೆ ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದ ಸಿಂಗಾರಾ ಎಂಬಲ್ಲಿ ನಡೆದಿದೆ.

ಚಾಮರಾಜನಗರ: ತಾಯಿ ಕಳೆದುಕೊಂಡು ಅನಾಥವಾಗಿದ್ದ ಎರಡು ಮರಿ ಹುಲಿಗಳನ್ನು ರಕ್ಷಿಸಿರುವ ಘಟನೆ ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದ ಸಿಂಗಾರಾ ಎಂಬಲ್ಲಿ ನಡೆದಿದೆ.
ಶುಕ್ರವಾರವಷ್ಟೇ ಹೆಣ್ಣು ಹುಲಿಯೊಂದು ಅಸಹಜವಾಗಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿತ್ತು. ಸಾವಿನ ತನಿಖೆ ನಡೆಸಲು ಅರಣ್ಯ ಇಲಾಖೆ ಅಧಿಕಾರಿಗಳು ಇಂದು ಸ್ಥಳಕ್ಕೆ ತೆರಳಿದ ವೇಳೆ ಎರಡು ಗಂಡು ಹುಲಿ ಮರಿಗಳು ಪತ್ತೆಯಾಗಿವೆ. ತಾಯಿಯನ್ನು ಕಳೆದುಕೊಂಡಿದ್ದ ಕಂಗಲಾಗಿದ್ದ ಮರಿಗಳ ಆರೈಕೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು, ಮೃತಪಟ್ಟ ಹುಲಿಯು ವಿಷ ಹಾಕಿದ್ದ ಕಾಡುಹಂದಿ ಮಾಂಸ ತಿಂದು ಸತ್ತಿರುವ ಶಂಕೆ ವ್ಯಕ್ತವಾಗಿದೆ. ಎರಡು ತಿಂಗಳ ಹಿಂದೆಯೂ 5 ಕೆನ್ನಾಯಿಗಳು ಇದೇ ಪ್ರದೇಶದಲ್ಲಿ ವಿಷ ಪ್ರಾಷನದಿಂದ ಸಾವನ್ನಪ್ಪಿದ್ದವು.
ಬುಡಕಟ್ಟು ಮಹಿಳೆಯೊಬ್ಬಳು ಹುಲಿ ದಾಳಿಗೆ ಬಲಿಯಾದ ಬಳಿಕ ವಿಷಪ್ರಾಶನ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ.
-ಗುಳಿಪುರ ನಂದೀಶ್ ಎಂ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


