ಮುಂದಿನ ವರ್ಷದ ಬಿಟಿಎಸ್ ನ.18 ರಿಂದ 20: ಹೈಬ್ರೀಡ್ ಮಾದರಿ
ಮುಂದಿನ ವರ್ಷದ ಬೆಂಗಳೂರು ಟೆಕ್ ಸಮಿಟ್ ನವೆಂಬರ್ 18-, 19 ಮತ್ತು 20 ರಂದು ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

ಬೆಂಗಳೂರು: ಮುಂದಿನ ವರ್ಷದ ಬೆಂಗಳೂರು ಟೆಕ್ ಸಮಿಟ್ ನವೆಂಬರ್ 18-, 19 ಮತ್ತು 20 ರಂದು ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.
ಮೂರು ದಿನಗಳ ಜಾಗತಿಕ ಮಟ್ಟದ ಬೆಂಗಳೂರು ಟೆಕ್ ಸಮಿಟ್-2020 ಅತ್ಯಂತ ಯಶಸ್ವಿಯಾಗಿದ್ದು, ಇದೇ ಮೊದಲ ಬಾರಿಗೆ ವರ್ಚುಯಲ್ ವೇದಿಕೆಯ ಮೂಲಕ ನಡೆದ ಈ ಪ್ರತಿಷ್ಠಿತ ಶೃಂಗ ವು 2.5 ಕೋಟಿಗೂ ಹೆಚ್ಚು ದೇಶ- ವಿದೇಶಿಯರನ್ನು ತಲುಪಿದೆ.
ಕೋವಿಡ್ ಸಂಕಷ್ಟ ಕಾಲದಲ್ಲಿ ನಡೆದ ಈ ಶೃಂಗವು ಎಲ್ಲರ ಊಹೆಮೀರಿ ಮಿಂಚಿತು. ಈವರೆಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನದ ಮೂಲಕ ಕರ್ನಾಟಕವನ್ನು ಗುರುತಿಸುತ್ತಿದ್ದ ಜಗತ್ತಿನ ಪ್ರಮುಖ ದೇಶಗಳು, ಈಗ ತಂತ್ರಜ್ಞಾನದ ಮೂಲಕವೂ ರಾಜ್ಯವನ್ನು ಅಚ್ಚರಿಯಿಂದ ನೋಡುತ್ತಿವೆ ಎಂದು ಐಟಿ ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಮುಂದಿನ ವರ್ಷದ ಬೆಂಗಳೂರು ಟೆಕ್ ಸಮಿಟ್ ದಿನಾಂಕವನ್ನು ಘೋಷಣೆ ಮಾಡಿರುವ ಅಶ್ವತ್ಥ್ ನಾರಾಯಣ್ ಅವರು, 2021ರ ನವೆಂಬರ್ 18, 19 ಹಾಗೂ 20 ರಂದು ಬೆಂಗಳೂರು ತಂತ್ರಜ್ಞಾನ ಶೃಂಗ ನಡೆಯಲಿದೆ. ಅದು 2019ರ ಆಫ್'ಲೈನ್ ಹಾಗೂ 2020ರ ಆನ್'ಲೈನ್ ಕಾಂಬಿನೇಷನ್ ಸೇರಿ ಹೈಬ್ರಿಡ್ ಪ್ರಸಕ್ತ ಶೃಂಗದ ದಾಖಲೆಗಳನ್ನು ಮೀರುವಂತೆ ಯಶಸ್ವಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


