ರಾಜ್ಯ

ಕುಖ್ಯಾತ ನಾಲ್ವರು ಕಳ್ಳರ ಬಂಧನ: 16 ಲಕ್ಷ ರೂ.ಮೌಲ್ಯದ ಮಾಲು ವಶ

ಕೆಎಸ್ ಆರ್ ಟಿಸಿ ಬಸ್ ನಲ್ಲಿ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಿರುವ ಉಪ್ಪಾರಪೇಟೆ ಪೊಲೀಸರು 318 ಗ್ರಾಂ ತೂಕದ ಆಭರಣ, 30 ಸಾವಿರ ರೂ.ನಗದು ವಶಪಡಿಸಿಕೊಂಡಿದ್ದಾರೆ.

ಕುಖ್ಯಾತ ನಾಲ್ವರು ಕಳ್ಳರ ಬಂಧನ: 16 ಲಕ್ಷ ರೂ.ಮೌಲ್ಯದ ಮಾಲು ವಶ
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ನಲ್ಲಿ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಿರುವ ಉಪ್ಪಾರಪೇಟೆ ಪೊಲೀಸರು 318 ಗ್ರಾಂ ತೂಕದ ಆಭರಣ, 30 ಸಾವಿರ ರೂ.ನಗದು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ಅಪ್ರೋಜ್ (40), ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಲೋಹಿತ್ (21), ಬೆಂಗಳೂರು ರವಿ (52), ಬಳ್ಳಾರಿ ಜಿಲ್ಲೆಯ ಅಕ್ಷಯ್ ಸುಶೀಲೇಂದ್ರರಾವ್ ಸಂಕನೂರ್ ಬಂಧಿತ ಆರೋಪಿಗಳು.

ಅಕ್ಟೋಬರ್ 19ರಂದು ಮಧ್ಯಾಹ್ನ 12 ಗಂಟೆಗೆ ಹಾಸನದಿಂದ ಬೆಂಗಳೂರಿಗೆ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸಿ ಮಧ್ಯಾಹ್ನ 3 ಗಂಟೆಗೆ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದ ವ್ಯಕ್ತಿಯೊಬ್ಬರ ಬ್ಯಾಗ್ ಕಾಣೆಯಾಗಿತ್ತು. ಬ್ಯಾಗ್ ನಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಮತ್ತು 50 ಸಾವಿರ ರೂ.ನಗದು ಹಣವಿತ್ತು. ಈ ಬಗ್ಗೆ ಅವರು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.