ಮಲೆನಾಡು ಅರಣ್ಯ ಭೂಮಿಯನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ನಿರ್ಧಾರವನ್ನು ಕೈಬಿಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ
ಮಲೆನಾಡಿನ ಅರಣ್ಯ ಪ್ರದೇಶವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ನಿರ್ಧಾರದಿಂದ ಹಿಂದಕ್ಕೆ ಸರಿಯಿರಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.

ಶಿವಮೊಗ್ಗ: ಮಲೆನಾಡಿನ ಅರಣ್ಯ ಪ್ರದೇಶವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ನಿರ್ಧಾರದಿಂದ ಹಿಂದಕ್ಕೆ ಸರಿಯಿರಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.
ಮಲ್ನಾಡ್ ಪ್ರದೇಶದ ಅರಣ್ಯ ಭೂಮಿಯನ್ನು ಖಾಸಗಿ ಸಂಸ್ಥೆಗಳಿಗೆ ಹಸ್ತಾಂತರಿಸಲು ಸರ್ಕಾರ ಚಿಂತನೆ ನಡೆಸುತ್ತಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿ. 1980ರಲ್ಲಿ ಭದ್ರಾವತಿ ಎಂಪಿಎಂ ಕಾರ್ಖಾನೆಗೆ 40 ವರ್ಷಗಳ ಸೀಮಿತ ಅವಧಿಗೆ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೇರಿದ ಅರಣ್ಯ ಪ್ರದೇಶ ಲೀಸ್"ಗೆ ನೀಡಲಾಗಿತ್ತು. ಲೀಸ್ ಅವಧಿ ಮುಗಿದ ಕೂಡಲೇ ಈ ಪ್ರದೇಶ ಅರಣ್ಯ ಇಲಾಖೆಗೆ ಹಿಂತಿರುಗಿಸಬೇಕು ಎನ್ನುವ ಷರತ್ತು ವಿಧಿಸಲಾಗಿತ್ತು. ಪ್ರಸಕ್ತ ವರ್ಷ ಆಗಸ್ಟ್ ತಿಂಗಳಿನಲ್ಲಿ ಲೀಸ್ ಅವಧಿ ಮುಗಿದಿದೆ. ಎಂಪಿಎಂ ಕಾರ್ಖಾನೆ ಸ್ಥಗಿತವಾಗಿ ವರ್ಷಗಳೇ ಕಳೆದಿವೆ.. ಹಾಗಾಗಿ ನಿಯಮಾನುಸಾರ ನೆಡುತೋಪುಗಳನ್ನು ಅರಣ್ಯ ಇಲಾಖೆಗೆ ಹಿಂತಿರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಅರಣ್ಯ ಪ್ರದೇಶವನ್ನು ಖಾಸಗಿಯವರಿಗೆ ನೀಡುವುದರ ವಿರುದ್ಧ ಮಲೆನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಪ್ರತಿಭಟನೆಗಳೂ ಆರಂಭವಾಗಿದೆ. ಪ್ರಗತಿಪರರು, ಪರಿಸರ ಹೋರಾಟಗಾರರು, ಜನಸಾಮಾನ್ಯರೂ ಆತಂಕ ವ್ಯಕ್ತಪಡಿಸಿ, ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆದರೂ ಸರ್ಕಾರ ಮಲೆನಾಡಿನ ಜನಜೀವನ, ಭವಿಷ್ಯದ ಜೊತೆಗೆ ಆಡವಾಡುತ್ತಿದೆ ಎಂದು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


