ಕೊರೋನಾ ಎಫೆಕ್ಟ್: ಆರಂಭವಾಗಿದ್ದ ಕಾಲೇಜುಗಳನ್ನು ಮತ್ತೆ ಮುಚ್ಚಲು ಸರ್ಕಾರ ಚಿಂತನೆ!
ಕಾಲೇಜುಗಳು ಆರಂಭವಾದ ಬಳಿಕ ಬೆಂಗಳೂರಿನಲ್ಲಿ ಮತ್ತೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯಬಿದ್ದರೆ ಆರಂಭವಾಗಿರುವ ಕಾಲೇಜುಗಳನ್ನು ಮತ್ತೆ ಮುಚ್ಚಲು ಸರ್ಕಾರ ಚಿಂತನೆ ನಡೆಸುತ್ತಿದೆ.

ಬೆಂಗಳೂರು: ಕಾಲೇಜುಗಳು ಆರಂಭವಾದ ಬಳಿಕ ಬೆಂಗಳೂರಿನಲ್ಲಿ ಮತ್ತೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯಬಿದ್ದರೆ ಆರಂಭವಾಗಿರುವ ಕಾಲೇಜುಗಳನ್ನು ಮತ್ತೆ ಮುಚ್ಚಲು ಸರ್ಕಾರ ಚಿಂತನೆ ನಡೆಸುತ್ತಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್ ಅವರು, 120-130 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದೆ. ಹಿರಿಯ ಅಧಿಕಾರಿಗಳೊಂದಿಗೆ ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯದ ಹಿರಿಯ ಶಿಕ್ಷಣ ತಜ್ಞ ಮತ್ತು ಕಾರ್ಯಕ್ರಮದ ಮುಖ್ಯಸ್ಥ ಡಾ. ನಿರಂಜನಾರಧ್ಯ ವಿ ಪಿಯವರು ಹೇಳಿಕೆ ನೀಡಿ, ಸರ್ಕಾರ ನಿರ್ಧಾರ ಅವೈಜ್ಞಾನಿಕವಾದದ್ದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಹಾಗೂ ಸಚಿವರು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳಸಬೇಕು. ಆದರೆ, ಇಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ಪರೀಕ್ಷೆಗಳ ಸಂಖ್ಯೆ ಹೆಚ್ಚಾದಾಗ ಹೆಚ್ಚೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗುತ್ತವೆ. ಆದರೆ, ಕಾಲೇಜುಗಳನ್ನು ಪುನರಾರಂಭ ಮಾಡಿದ್ದರಿಂದಲೇ ಸೋಂಕು ಹೆಚ್ಚಾಗಿದೆ ಎಂದು ಹೇಳುವುದು ಸರಿಯಲ್ಲ. ಪರಿಸ್ಥಿತಿ ಹೇಗೆ ನಿಭಾಯಿಸಬೇಕೆಂಬುದಕ್ಕೆ ಸರ್ಕಾರದ ಬಳಿ ಯೋಜನೆಗಳಿಲ್ಲ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕಿದೆ ಎಂದು ತಿಳಿಸಿದ್ದಾರೆ.
ಸೋಂಕು ಪ್ರಕರಣಗಳು ಇದೇ ರೀತಿ ಏರಿಕೆಯಾಗುತ್ತಿದ್ದರೆ ನಮ್ಮ ಬಳಿ ಯಾವುದೇ ಆಯ್ಕೆಗಳಿಲ್ಲ. ಕಾಲೇಜುಗಳನ್ನು ಮುಚ್ಚಲೇಬೇಕಾಗುತ್ತದೆ ಎಂದು ಸುಧಾಕರ್ ಅವರು ತಿಳಿಸಿದ್ದಾರೆ.
ಯುವಕರಲ್ಲಿ ಹೆಚ್ಚು ರೋಗನಿರೋಧಕ ಶಕ್ತಿ ಹೆಚ್ಚಾಗಿರುತ್ತದೆ. ಹಾಗೆಂದು ವಿದ್ಯಾರ್ಥಿಗಳಿಗೆ ಸೋಂಕು ತಗುಲುವುದೇ ಇಲ್ಲ ಎಂದು ನಾನು ಹೇಳುತ್ತಿಲ್ಲ. ವಿದ್ಯಾರ್ಥಿಗಳನ್ನು ನಾವು ರಕ್ಷಣೆ ಮಾಡಬೇಕು. ಅವರ ಶಿಕ್ಷಣ ಭವಿಷ್ಯವನ್ನು ಉತ್ತಮವಾಗಿ ರೂಪುಗೊಳ್ಳುವಂತೆ ಮಾಡಬೇಕು. ಇದೀಗ ನಮ್ಮ ಮೇಲೆ ದೊಡ್ಡ ಜವಾಬ್ದಾರಿಯಿಲ್ಲು. ಹಂತ ಹಂತದಲ್ಲಿ ಶಾಲೆ ಹಾಗೂ ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ನಿರ್ಧಾರ ಕೈಗೊಳ್ಳುತ್ತೇವೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


