ನಿವಾರ್ ಚಂಡಮಾರುತ: ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ, ಬೆಂಗಳೂರಿಗೂ ಮಳೆ ಅಪಾಯ
ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ 'ನಿವಾರ್' ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕದಲ್ಲೂ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚೆನ್ನೈ: ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ 'ನಿವಾರ್' ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕದಲ್ಲೂ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮ ಉಂಟಾಗಿರುವ ನಿವಾರ್ ಚಂಡಮಾರುತದ ಪರಿಣಾಮ ನವೆಂಬರ್ 25 ಮತ್ತು 26 ರಂದು ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಎರಡೂ ದಿನ ಈ ಭಾಗಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.
ನವೆಂಬರ್ 25ರಂದು ಬೆಂಗಳೂರಿನಲ್ಲಿ ತೀವ್ರ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ರಾತ್ರಿ ಕೂಡ ಮಳೆ ಸುರಿಯಬಹುದು. ಇನ್ನು ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕೂಡ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


