ರಾಜ್ಯ

ರಾಜ್ಯದಲ್ಲಿ 29,451 ಕೋವಿಡ್ ಲಸಿಕೆ ವಿತರಣಾ ಕೇಂದ್ರಗಳ ಗುರುತು: ಸಚಿವ ಡಾ..ಕೆ.ಸುಧಾಕರ್

ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 29, 451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ 29,451 ಕೋವಿಡ್ ಲಸಿಕೆ ವಿತರಣಾ ಕೇಂದ್ರಗಳ ಗುರುತು: ಸಚಿವ ಡಾ..ಕೆ.ಸುಧಾಕರ್
ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
Published On :

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 29, 451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರದ ಸೂಚನೆಯಂತೆ, ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ರಾಜ್ಯ ಕೋವಿಡ್ ಕಾರ್ಯಪಡೆ ಸಭೆ ಸೇರಿ ಈ ಕುರಿತು ಚರ್ಚೆ ನಡೆಸಿದ್ದು, ಲಸಿಗೆ ಸಂಗ್ರಹ ಹಾಗೂ ವಿತರಣೆಗೆ ಅಗತ್ಯ ಏರ್ಪಾಡು ಮಾಡಲಾಗಿದೆ ಎಂದಿದ್ದಾರೆ.

ರಾಜ್ಯಾದ್ಯಂತ 29, 451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದ್ದು, ಲಸಿಕೆ ವಿತರಣೆಗಾಗಿ 10, 0008 ವ್ಯಾಕ್ಸಿನೇಟರ್ ಸಿಬ್ಬಂದಿಯನ್ನು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರಿ ಆರೋಗ್ಯ ಕೇಂದ್ರಗಳ ಸಿಬ್ಬಂದಿ,ಆರೋಗ್ಯ ಕಾರ್ಯಕರ್ತರ ಬಗೆಗಿನ ಮಾಹಿತಿಯನ್ನು ದಾಖಲಿಸಲಾಗಿದೆ.ಶೇ.80 ರಷ್ಟು ಖಾಸಗಿ ಆಸ್ಪತ್ರೆಗಳು ಮಾಹಿತಿ ಒದಗಿಸಿದ್ದು,ಇನ್ನೂ ಶೇ.20 ರಷ್ಟು ಆಸ್ಪತ್ರೆಗಳು ವಾರದೊಳಗೆ ಮಾಹಿತಿ ನೀಡಲಿವೆ. ರಾಜ್ಯದಲ್ಲಿ ಲಸಿಕೆ ಸಂಗ್ರಹ ಮತ್ತು ವಿತರಣೆಗೆ 2,855 ಕೋಲ್ಡ್ ಚೇನ್ ಕೇಂದ್ರ ಲಭ್ಯವಿದೆ. ಬೇಗನೆ ಲಸಿಕೆ ವಿತರಣೆ ಮಾಡಲು ಸಾಧ್ಯವಾಗುವಂತೆ ಹೊಸದಾಗಿ ಬೆಂಗಳೂರು ನಗರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಸಂಗ್ರಹ ಕೇಂದ್ರಗಳನ್ನು ಆರಂಭಿಸಲು ಪ್ರಸ್ತಾಪಿಸಲಾಗಿದೆ. ಈ ಕೇಂದ್ರಗ ಳಿಗೆ ವಾಕ್ ಇನ್ ಕೂಲರ್, ವಾಕ್ ಇನ್ ಫ್ರೀಜರ್ ಗಳನ್ನು ಕೂಡ ನೀಡುವ ಪ್ರಸ್ತಾಪವಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ 10 ವಾಕ್ ಇನ್ ಕೂಲರ್ ಮತ್ತು 4 ವಾಕ್ ಇನ್ ಫ್ರೀಜರ್ ಇದೆ. ಕೇಂದ್ರ ಆರೋಗ್ಯ ಸಚಿವಾಲಯವು 3 ವಾಕ್ ಇನ್ ಕೂಲರ್, 2 ವಾಕ್ ಇನ್ ಫ್ರೀಜರ್ ನೀಡಲಿದೆ. ಇದಕ್ಕಾಗಿ ಸಿವಿಲ್ ಕಾಮಗಾರಿ ಆರಂಭವಾಗಿದೆ. ಕೋಲ್ಡ್ ಸ್ಟೋರೇಜ್ ಮತ್ತು ಸಂಗ್ರಹಕ್ಕೆ ಸಂಬಂಧಿಸಿದಂತೆ, ಡೋಸ್ ಗಳು ಮತ್ತಿತರ ಮಾಹಿತಿ ಅಗತ್ಯವಿದೆ. ಈ ಮಾಹಿತಿಯನ್ನು ಶೀಘ್ರ ಒದಗಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಕೋರಲಾಗಿದೆ ಎಂದು ತಿಳಿಸಿದ್ದಾರೆ.

ಲಸಿಕೆ ಕಾರ್ಯಕ್ರಮಕ್ಕೆ ಅಗ ತ್ಯವಿರುವ ಡ್ರೈ ಸ್ಟೋರೇಜ್ ಬಗ್ಗೆಯೂ ನಿರ್ಧಾರ ಕೈಗೊಳ್ಳಬೇಕಿದೆ. ಕೇಂದ್ರ ಸರ್ಕಾರ ಈಗಾಗಲೇ ಡೀಪ್ ಫ್ರೀಜರ್ ಹಾಗೂ ರೆಫ್ರಿಜರೇಟರ್ ಗಳನ್ನು ಮಂಜೂರು ಮಾಡಿದೆ. ಹೆಚ್ಚುವರಿ ಅಗತ್ಯಗಳ ಕುರಿತು ಕೇಂದ್ರ ಸರ್ಕಾರಕ್ಕೆ ಮಾ ಹಿತಿ ನೀಡಲಾಗಿದೆ. ಪಶು ಸಂಗೋಪನೆ ಇಲಾಖೆಯಲ್ಲಿ ಲಭ್ಯವಿ ರುವ ಕೋಲ್ಡ್ ಸ್ಟೋರೇಜ್ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ. ಕಾರ್ಪೊರೇಟ್ ಖಾಸಗಿ ಆಸ್ಪತ್ರೆಗಳ ಕೋಲ್ಡ್ ಸ್ಟೋರೇಜ್ ಬಗ್ಗೆಯೂ ಮಾಹಿತಿ ಪಡೆಯಲಾಗಿದು ಎಂದು ಅವರು ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.