ಅಂಬರೀಷ್ ಪುಣ್ಯತಿಥಿ: ಸಂಸದ ಪ್ರತಾಪ್ ಸಿಂಹ ಸೇರಿ ರಾಜಕೀಯ ನಾಯಕರಿಂದ ಸ್ಮರಣೆ
ಖ್ಯಾತ ದಿವಂಗತ ನಟ ಹಾಗೂ ರಾಜಕಾರಣಿ ಅಂಬರೀಷ್ ಅವರ 2ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸಂಸದ ಪ್ರತಾಪ ಸಿಂಹ ಸೇರಿದಂತೆ ಸಚಿವರುಗಳು, ರಾಜಕಾರಣಿಗಳು ಅವರನ್ನು ಸ್ಮರಿಸಿಕೊಂಡಿದ್ದಾರೆ.

ಬೆಂಗಳೂರು: ಖ್ಯಾತ ದಿವಂಗತ ನಟ ಹಾಗೂ ರಾಜಕಾರಣಿ ಅಂಬರೀಷ್ ಅವರ 2ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸಂಸದ ಪ್ರತಾಪ ಸಿಂಹ ಸೇರಿದಂತೆ ಸಚಿವರುಗಳು, ರಾಜಕಾರಣಿಗಳು ಅವರನ್ನು ಸ್ಮರಿಸಿಕೊಂಡಿದ್ದಾರೆ.
ಸಂಸದ ಪ್ರತಾಪ್ ಸಿಂಹ, ಎಲ್ಲರಿಂದಲೂ ಪ್ರೀತಿಸಲ್ಪಡುವುದಕ್ಕೂ, ಭಯಪಡುವುದಕ್ಕೂ ಬಹಳ ವ್ಯತ್ಯಾಸವಿದೆ. ಅಂಬರೀಷ್ ಅವರು ತಮ್ಮ ವ್ಯಕ್ತಿತ್ವದ ಮೂಲಕ ಎಲ್ಲರ ಪ್ರೀತಿ, ಅಭಿಮಾನ ಗಳಿಸಿದ್ದರು, ಅವರನ್ನು ನಾವೆಲ್ಲರೂ ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಸೋಷಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ.
ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಗೌಡ, ಅಂಬರೀಷ್ ಅವರ ನಿವಾಸಕ್ಕೆ ತೆರಳಿ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿದರು.

ಕನ್ನಡ ಚಲನಚಿತ್ರರಂಗದ ಹೆಸರಾಂತ ನಟ, ಕೇಂದ್ರ ಮತ್ತು ರಾಜ್ಯದ ಮಾಜಿ ಸಚಿವರಾಗಿದ್ದ ದಿವಂಗತ ಅಂಬರೀಶ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಕನ್ನಡ ಚಲನಚಿತ್ರ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಅಂಬರೀಶ್ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಿಕೊಳ್ಳೋಣ ಎಂದು ಸಮಾಜ ಕಲ್ಯಾಣ ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


