ಕ್ರೂಸರ್-ಕಾರು ಡಿಕ್ಕಿ: ನಾಲ್ವರ ದಾರುಣ ಸಾವು
ಕ್ರೂಸರ್ ಹಾಗೂ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಕೊಂಡಿಕೊಪ್ಪ ಕ್ರಾಸ್ ಬಳಿ ಸಂಭವಿಸಿದೆ.

ಧಾರವಾಡ: ಕ್ರೂಸರ್ ಹಾಗೂ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಕೊಂಡಿಕೊಪ್ಪ ಕ್ರಾಸ್ ಬಳಿ ಸಂಭವಿಸಿದೆ.
ಮೃತರನ್ನು ಮಾನ್ವಿಯ ವಿಠ್ಠಲ ನಗರದ ಸಣ್ಣಗಂಗಣ್ಣ, ನಾಗಮ್ಮ, ಈರಣ್ಣ, ಹಣಮಂತ ಎಂದು ಗುರುತಿಸಲಾಗಿದ್ದು, ಮೃತರೆಲ್ಲರು ಕಾರಿನಲ್ಲಿದ್ದವರು ಎನ್ನಲಾಗಿದೆ. ಕಾರಿನಲ್ಲಿ ಮಾನ್ವಿಯಿಂದ ಕಾರವಾರದ ಹಲಗದ ಆಸ್ಪತ್ರೆಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಕ್ರೂಸರ್ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಘಟನೆಯಲ್ಲಿ ಸಣ್ಣೀರಣ್ಣ, ಲಕ್ಷ್ಮೀ ಹಾಗೂ ಕ್ರೂಸರ್ ಚಾಲಕ ಮಲ್ಲಪ್ಪ ಅವರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಅಣ್ಣೀಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಣ್ಣಿಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


