ನಿವಾರ್ ಚಂಡಮಾರುತ: ಬೆಂಗಳೂರಿನಲ್ಲಿ ಇಂದು, ನಾಳೆ ಭಾರೀ ಮಳೆ ಸಾಧ್ಯತೆ
ನಿವಾರ್ ಚಂಡಮಾರುತ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.

ಬೆಂಗಳೂರು: ನಿವಾರ್ ಚಂಡಮಾರುತ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ದಕ್ಷಿಣ ಕರ್ನಾಟಕಕ್ಕೆ ಚಂಡಮಾರುತ ಅಪ್ಪಳಿಸುತ್ತಿದ್ದು, ಇದರ ಪರಿಣಾಮ ಬೆಂಗಳೂರು ಸೇರಿದಂತೆ ಹಲವೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಈ ನಡುವೆ ತಮಿಳುನಾಡು ರಾಜ್ಯದಲ್ಲೂ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ನಿವಾರ್ ಚಂಡಮಾರುತ ಈಗಾಗಲೇ ತಮಿಳುನಾಡು-ಪುದುಚೇರಿ ಕಡಲ ತೀರಕ್ಕೆ ಬಂದಪ್ಪಳಿಸಿದೆ. ಇಂದು ಸಂಜೆ ವೇಳೆಗೆ ನಿವಾರ್ ತನ್ನ ತೀವ್ರತೆಯನ್ನು ಹೆಚ್ಚಿಸಿಕೊಳ್ಳುವ ನಿರೀಕ್ಷೆ ಇದೆ. ಪುದುಚೇರಿಯಿಂದ ಪೂರ್ವ ಆಗ್ನೇಯ ದಿಕ್ಕಿನ 410 ಕಿಲೊಮೀಟರ್ ದೂರದಲ್ಲಿ, ಚೆನ್ನೈಗೆ ದಕ್ಷಿಣ ಆಗ್ನೇಯ ದಿಕ್ಕಿನ 450 ಕಿಲೊಮೀಟರ್ ದೂರದಲ್ಲಿ ನಿವಾರ್ ಕೇಂದ್ರೀಕೃತವಾಗಿದ್ದು, ಶರವೇಗದಲ್ಲಿ ಮುನ್ನುಗ್ಗಿ ಬರುತ್ತಿದೆ.
ಸಂಜೆ ವೇಳೆಗೆ 120 ಕಿಲೋಮೀಟರ್ ವೇಗದಲ್ಲಿ ನಿವಾರ್ ಅಪ್ಪಳಿಸುವ ಮುನ್ಸೂಚನೆ ಇದೆ. ಮುಂದಿನ 6 ಗಂಟೆಗಳಲ್ಲಿ ನಿವಾರ್ ಅಬ್ಬರ ಗೊತ್ತಾಗಲಿದೆ. ಮುಂಜಾಗ್ರತಾ ಕ್ರಮವಾಗಿ 1,200 ಮಂದಿಯ ಎನ್‍ಡಿಆರ್‍ಎಫ್ ತಂಡವನ್ನು ನಿಯೋಜಿಸಲಾಗಿದೆ. ಜೊತೆಗೆ ಪ್ರಧಾನಿ ಮೋದಿ ಕೂಡ ನೆರವಿನ ಭರವಸೆ ನೀಡಿದ್ದಾರೆ. ಅಲ್ಲದೇ ನಿವಾರ್ ಹಾವಳಿಯಿಂದಾಗುವ ಅನಾಹುತ ತಪ್ಪಿಸಲು ಇಂದು ತಮಿಳುನಾಡಿನಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ಪ್ರಮುಖ ಬಂದರುಗಳನ್ನು ಬಂದ್ ಮಾಡಲಾಗಿದೆ.
ಇನ್ನು ಕರ್ನಾಟಕ, ಆಂಧ್ರ, ತೆಲಂಗಾಣದ ಮೇಲೆಯೂ ನಿವಾರ್ ಪರಿಣಾಮ ಬೀರಲಿದೆ. ಇಂದಿನಿಂದ ನವೆಂಬರ್ 27ರವರೆಗೆ ರಾಜ್ಯದ ಹಲವೆಡೆ ಮಳೆ ಆಗಲಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ, ಚಾಮರಾಜನಗರದಲ್ಲಿ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


