ರಾಜ್ಯ

ಹರಿಹರ ಬಳಿ ಅಪಘಾತ: ಮಹಿಳಾ ಎಸ್ಐ ಸೇರಿ 6 ಜನರಿಗೆ ಗಂಭೀರ ಗಾಯ

ಜಿಲ್ಲೆ ಹರಿಹರ ಸಮೀಪದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಮಾಗಡಿ ಪೊಲೀಸ್ ಠಾಣೆಯ ಮಹಿಳಾ ಸಬ್ ಇನ್ಸ್ ಪೆಕ್ಟರ್ ಸುಧಾ ಸೇರಿದಂತೆ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹರಿಹರ ಬಳಿ ಅಪಘಾತ: ಮಹಿಳಾ ಎಸ್ಐ ಸೇರಿ 6 ಜನರಿಗೆ ಗಂಭೀರ ಗಾಯ
ಸಾಂದರ್ಭಿಕ ಚಿತ್ರ
Published On :

ದಾವಣಗೆರೆ: ಜಿಲ್ಲೆ ಹರಿಹರ ಸಮೀಪದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಮಾಗಡಿ ಪೊಲೀಸ್ ಠಾಣೆಯ ಮಹಿಳಾ ಸಬ್ ಇನ್ಸ್ ಪೆಕ್ಟರ್ ಸುಧಾ ಸೇರಿದಂತೆ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಕರಣವೊಂದರ ವಿಚಾರಣೆ ಸಂಬಂಧ ಆರೋಪಿಯೊಂದಿಗೆ ಬೆಂಗಳೂರಿನಿಂದ ಬೆಳಗಾವಿಗೆ ಖಾಸಗಿ ವಾಹನದಲ್ಲಿ ತೆರಳುತ್ತಿದ್ದಾಗ ಹರಿಹರ ಸಮೀಪ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಾಗ ಈ ದುರಂತ ಸಂಭವಿಸಿದೆ.

ಎಲ್ಲ ಗಾಯಾಳುಗಳನ್ನು ದಾವಣಗೆರೆಯ ಎಸ್ ಎಸ್ ವೈದ್ಯಕೀಯ ಮಹಾವಿದ್ಯಾಲಯಕ್ಕೆದಾಖಲು ಮಾಡಲಾಗಿದ್ದು , ಚಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಸಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.