ಪೊಲೀಸ್ ಅಧಿಕಾರಿಗಳಂತೆ ನಟಿಸಿ ಬ್ಲ್ಯಾಕ್‌ಮೇಲ್: ಮಂಗಳೂರಿನಲ್ಲಿ ಬೆಂಗಳೂರು ಮೂಲದ ಯುವಕರ ಬಂಧನ
ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿ ವ್ಯಕ್ತಿಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಬೆಂಗಳೂರು ಮೂಲದ ಇಬ್ಬರು ಯುವಕರನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.

ಮಂಗಳೂರು: ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿ ವ್ಯಕ್ತಿಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಬೆಂಗಳೂರು ಮೂಲದ ಇಬ್ಬರು ಯುವಕರನ್ನು ಮಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಪವನ್ ಎಲ್ ಮತ್ತು ಗೋಕುಲ್ ರಾಜು ಎಂದು ಗುರುತಿಸಲಾಗಿದೆ, ಇಬ್ಬರೂ 20 ವರ್ಷದವರಾಗಿದ್ದಾರೆ.
ಸಾಕ್ಷಿ ರಾಜ್ ಎನ್ನುವ ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಯನ್ನು ರಚಿಸಿದ ಇವರಿಬ್ಬರು ಮಂಗಳೂರಿನ ಕೆಪಿಟಿ ನಿವಾಸಿ ರಾಜೇಶ್ ಎಂಬ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿ ನಂತರ ಮಹಿಳೆಯಂತೆ ಕರೆ ಮಾಡಿದ್ದಾರೆ, ಮಾತ್ರವಲ್ಲದೆ ರಾಜೇಶ್ ಗೆ ಮಹಿಳೆಯ ಅಶ್ಲೀಲ ಫೋಟೋಗಳನ್ನು ಕಳಿಸಿದ್ದಾರೆ. ಅದಕ್ಕೆ ಬದಲಾಗಿ ರಾಜೇಶ್ ಸಹ ನಗ್ನ ಚಿತ್ರಗಳನ್ನು ಕಳಿಸುವಂತೆ ಒತ್ತಾಯಿಸಿದ್ದಾರೆ.
ಒಮ್ಮೆ ರಾಜೇಶ್ ಫೋಟೋ ಕಳಿಸಿದ ನಂತರ ಅವರು ಹಣಕ್ಕಾಗಿ ಒತ್ತಾಯಿಸಲು ತೊಡಗಿದ್ದಾರೆ. ಅಲ್ಲದೆ ತಮ್ಮನ್ನು ತಾವು ಪೊಲೀಸ್ ಅಧಿಕಾರಿಗಳೆಂದು ಹೇಳಿಕೊಂಡ ಅವರು ರಾಜೇಶ್ ಗೆ ಬೆದರಿಕೆ ಹಾಕಲು ಸಹ ಮುಂದಾಗಿದ್ದಾರೆ. ಈ ಹಿನ್ನೆಲೆ ಅವರು ಹಲವಾರು ಬಾರಿ ರಾಜೇಶ್ ಗೆ ಕರೆ ಮಾಡಿದ್ದಾರೆ.
ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರ ಮಾರ್ಗದರ್ಶನದಂತೆ ತಂಡವನ್ನು ಡಿಸಿಪಿ (ಅಪರಾಧ ಮತ್ತು ಸಂಚಾರ) ವಿನಯ್ ವಿ ಗೌಂಕರ್ ರಚಿಸಿದರು. ಸೈಬರ್ ಕ್ರೈಮ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಬಿ ಸಿ ಗಿರೀಶ್ ಮತ್ತು ಇ ಮತ್ತು ಎನ್‌ಸಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಬಂಧಿತರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


