ಮಾಗಡಿ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪ ಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ ಚಾಲನೆ
ಮಾಗಡಿ ತಾಲೂಕಿನ ವಿವಿಧೆಡೆ ಇಂದು ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ ನಾರಾಯಣ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ರಾಮನಗರ: ಮಾಗಡಿ ತಾಲೂಕಿನ ವಿವಿಧೆಡೆ ಇಂದು ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ ನಾರಾಯಣ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.
ಆಗಲಕೋಟೆ ಗ್ರಾಮ ಪಂಚಾಯಿತಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ ಸಚಿವರು, ಹೇಳಿಗೆಹಳ್ಳಿ ಕಾಲೋನಿಯ ನಿವೇಶನಗಳ ಹಕ್ಕುಪತ್ರ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಶಾಸಕ ಮಂಜುನಾಥ್, ರಾಮನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹೆಚ್. ಎನ್. ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.
ಮೇಲನಹಳ್ಳಿ ಗ್ರಾಮದಲ್ಲಿ 415 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಸಚಿವರು, ಈ ಸಂಸ್ಥೆಯ ಮೂಲಕ ಸ್ಥಳೀಯ ಯುವಜನತೆಗೆ ಉತ್ತಮ ಗುಣಮಟ್ಟದ ಕೌಶಲ್ಯ ತರಬೇತಿ ದೊರಕಲಿದೆ ಎಂದಿದ್ದಾರೆ.
ಮಾಡಬಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೇನುಕಲ್ಲುಪಾಳ್ಯದಲ್ಲಿ ಪರಿಶಿಷ್ಟ ಪಂಗಡದ ನಾಗರಿಕರಿಗೆ ವಾಸಸ್ಥಳದ ಜಮೀನಿನ ಹಕ್ಕುಪತ್ರ ವಿತರಿಸಿದರು. ಒಟ್ಟು 54 ಜನರಿಗೆ ಇದನ್ನು ವಿತರಿಸಲಾಗಿದ್ದು, ಇವರ ಬದುಕಿನ ಸುಧಾರಣೆ ಹಾಗೂ ಅಭಿವೃದ್ಧಿಯ ನಿಟ್ಟಿನಲ್ಲಿ ಇದು ಪೂರಕವಾಗಲಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


