ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಮುಂದಾಗಿರುವವರಿಗೆ ಸಚಿವ ಸ್ಥಾನ ನೀಡಬಾರದು: ಪ್ರಶಾಂತ್ ಭೂಷಣ್
ಸುಪ್ರೀಂಕೋರ್ಟ್ ನ ಆದೇಶದಂತೆ ಎಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು ಆರ್ ಶಂಕರ್ ಅವರು ಸುಪ್ರೀಂ ಕೋರ್ಟ್ ಆದೇಶದಂತೆ ನೇರವಾಗಿ ಆಯ್ಕೆಯಾಗಿಲ್ಲ, ಬದಲಿಗೆ ಚುನಾಯಿತ ಶಾಸಕರಿಂದ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಲು ಮುಂದಾಗಿದ್ದಾರೆ ಎಂದು ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.

ಬೆಂಗಳೂರು: ಸುಪ್ರೀಂಕೋರ್ಟ್ ನ ಆದೇಶದಂತೆ ಎಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು ಆರ್ ಶಂಕರ್ ಅವರು ಸುಪ್ರೀಂ ಕೋರ್ಟ್ ಆದೇಶದಂತೆ ನೇರವಾಗಿ ಆಯ್ಕೆಯಾಗಿಲ್ಲ, ಬದಲಿಗೆ ಚುನಾಯಿತ ಶಾಸಕರಿಂದ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಲು ಮುಂದಾಗಿದ್ದಾರೆ ಎಂದು ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.
ವಿಧಾನ ಪರಿಷತ್ತಿನ ಸದಸ್ಯರಾದ ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್ ಅವರಿಗೆ ಸಚಿವ ಸ್ಥಾನ ನೀಡದಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ವಾದ ಮಂಡಿಸಲು ಕಾಲಾವಕಾಶ ನೀಡುವಂತೆ ಹೈಕೋರ್ಟ್‍ಗೆ ರಾಜ್ಯ ಸರ್ಕಾರ ಮನವಿ ಮಾಡಿದೆ.
ಮೂವರು ನೂತನ ಷರಿಷತ್ತಿಗೆ ಸಚಿವ ಸ್ಥಾನ ನೀಡಬಾರದೆಂದು ಕೋರಿ ವಕೀಲ ಎ.ಎಸ್.ಹರೀಶ್ ಕುಮಾರ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು, ಎಂಟಿಬಿ ನಾಗರಾಜ್, ಹೆಚ್.ವಿಶ್ವನಾಥ್, ಆರ್.ಶಂಕರ್ ಅವರು ಚುನಾವಣೆಯಲ್ಲಿ ಜನರಿಂದ ನೇರವಾಗಿ ಆಯ್ಕೆಯಾಗಿಲ್ಲ. ಎ.ಎಚ್ ವಿಶ್ವನಾಥ್ ಅವರು ಪರಿಷತ್‍ಗೆ ನಾಮ ನಿರ್ದೇಶನಗೊಂಡಿದ್ದಾರೆ
ಸುಪ್ರೀಂಕೋರ್ಟ್‍ನ ಆದೇಶದಂತೆ ಈ ಮೂವರೂ ಜನರಿಂದ ಆಯ್ಕೆಯಾಗಿಲ್ಲ. ಬದಲಿಗೆ ಚುನಾಯಿತ ಶಾಸಕರಿಂದ ಆಯ್ಕೆಯಾಗಿ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಮುಂದಾಗಿದ್ದಾರೆ. ಹೀಗಾಗಿ ಇವರನ್ನು ಸಚಿವರನ್ನಾಗಿಸದಂತೆ ನಿರ್ದೇಶಿಸಬೇಕು ಎಂದು ಕೋರಿದರು.
ಸರ್ಕಾರದ ಪರ ವಾದಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಅವರು, ಪ್ರಕರಣದಲ್ಲಿ ಅರ್ಜಿದಾರರು ಎತ್ತಿರುವ ವಾದಕ್ಕೆ ಸಂಬಂಧಿಸಿದಂತೆ ಸಾಕಷ್ಟು ಆಕ್ಷೇಪಣೆಗಳಿವೆ. ಅವುಗಳನ್ನು ವೀಡಿಯೋ ಕಾನ್ಫರೆನ್ಸ್ ಬದಲಿಗೆ ನೇರವಾಗಿ ಹಾಜರಾಗಿ ಮಂಡಿಸುವುದು ಸೂಕ್ತವೆನ್ನಿಸಿದೆ. ಹೀಗಾಗಿ ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಇದಕ್ಕೆ ಸಮ್ಮತಿಸಿದ ಪೀಠ, ಪ್ರತಿವಾದಿಗಳಾದ ಎಂಟಿಬಿ, ಶಂಕರ್ ಹಾಗೂ ವಿಶ್ವನಾಥ್ ಪರ ವಕೀಲರು ಕೂಡ ನೇರವಾಗಿ ಬಂದು ವಾದ ಮಂಡಿಸಬಹುದು ಎಂದು ಸೂಚಿಸಿ, ವಿಚಾರಣೆಯನ್ನು ಗುರವಾರ ಮಧ್ಯಾಹ್ನಕ್ಕೆ ಮುಂದೂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


